IOCL Recruitment 2023: 490 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಸೆ.10ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ಬೆಂಗಳೂರು, ಆಗಸ್ಟ್ 24: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ತನ್ನಲ್ಲಿ ಖಾಲಿ ಇರುವ ನೂರಾರು ಹುದ್ದೆಗಳ ಭರ್ತಿಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ ಮಾಡಬೇಕೆಂಬ ಹಂಬಲ ಹೊತ್ತವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಕೂಡಲೇ ಅರ್ಜಿ ಸಲ್ಲಿಸುವಂತೆ ಕಂಪನಿ ತಿಳಿಸಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಪ್ರೆಂಟಿಸ್, ಅಕೌಂಟ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಒಟ್ಟು 490 ಹುದ್ದೆಗಳು ಖಾಲಿ ಇವೆ. ಆಸಕ್ತರು ಅಭ್ಯರ್ಥಿಗಳು ಮುಂದಿನ ತಿಂಗಳ ಸೆಪ್ಟೆಂಬರ್ 10ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಯ್ಕೆ ಆಗುವವರಿಗೆ ಕರ್ನಾಟಕದಲ್ಲಿಯೇ ಪೋಸ್ಟಿಂಗ್ ನೀಡಲಾಗುವುದು ಕಂಪನಿಯ ನೇಮಕಾತಿ ಅಧಿಸೂಚನೆ ತಿಳಿಸಿದೆ.

ನೇಮಕಾತಿ ಪೂರ್ಣ ವಿವರ
ಸಂಸ್ಥೆ - ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆ ಹೆಸರು- ಅಪ್ರೆಂಟಿಸ್, ಅಕೌಂಟ್ಸ್ ಎಕ್ಸಿಕ್ಯೂಟಿವ್
ಖಾಲಿ ಹುದ್ದೆ ಸಂಖ್ಯೆ- 490
ಉದ್ಯೋಗದ ಸ್ಥಳ - ಕರ್ನಾಟಕ
ವೇತನ - ನಿಗದಿ ಮಾಡಿಲ್ಲ
ಅರ್ಜಿ ಸಲ್ಲಿಕೆ ಕಡೆ ದಿನ - ಸೆಪ್ಟೆಂಬರ್ 10
ಒಟ್ಟು 490 ಖಾಲಿ ಹುದ್ದೆಗಳ ಪೈಕಿ ಟ್ರೇಡ್ ಅಪ್ರೆಂಟಿಸ್ 150, ಟೆಕ್ನಿಷಿಯನ್ ಅಪ್ರೆಂಟಿಸ್ 110 ಹುದ್ದೆಗಳು ಮತ್ತು ಗ್ರಾಜುಯೇಟ್ ಅಪ್ರೆಂಟಿಸ್/ ಅಕೌಂಟ್ಸ್ ಎಕ್ಸಿಕ್ಯೂಟಿವ್ ಒಟ್ಟು 230 ಹುದ್ದೆಗಳು ಖಾಲಿ ಇವೆ.

ಶೈಕ್ಷಣಿಕ ಅರ್ಹತೆ ಮಾಹಿತಿ
ಕಂಪನಿಯ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಅಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 10ನೇ ತರಗತಿ ಮುಗಿಸಿರಬೇಕು. ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಡಿಪ್ಲೊಮಾ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್/ ಅಕೌಂಟ್ಸ್ ಎಕ್ಸಿಕ್ಯೂಟಿವ್ - ಪದವಿ, ಬಿಬಿಎ, ಬಿಎ, ಬಿ.ಕಾಂ, ಬಿ.ಎಸ್ಸಿ ಪದವಿ ಪಡೆದಿರಬೇಕು ಎಂದು ಸೂಚಿಸಲಾಗಿದೆ.
ವಯೋಮಿತಿ ಮತ್ತು ಸಡಿಲಿಕೆ ಮಾಹಿತಿ
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಇದೇ ವರ್ಷ 2023ರ ಆಗಸ್ಟ್ 31ರ ತಿಂಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು ಎಂದು ತಿಳಿಸಿದೆ. ಒಬಿಸಿ NCL ಅಭ್ಯರ್ಥಿಗಳು 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, PwBD (ಸಾಮಾನ್ಯ) ಅಭ್ಯರ್ಥಿಗಳು- 10 ವರ್ಷ, PwBD (OBC-NCL) ಅಭ್ಯರ್ಥಿಗಳು- 13 ವರ್ಷ ಹಾಗೂ PwBD ಎಸ್‌ಸಿಎಸ್‌ಟಿ ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಅರ್ಜಿಸಲ್ಲಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಲ್ಲ ಎಂದು ತಿಳಿಸಿರುವ ಕಂಪನಿಯು, ಆಯ್ಕೆ ಆಗುವವರಿಗೆ ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಆಯ್ಕೆ ಪ್ರಕ್ರಿಯೆ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ನಂತರ ದಾಖಲಾತಿ ಪರಿಶೀಲನೆ ಬಳಿಕ ಸಂದರ್ಶನ ನಡೆಸಲಾಗುವುದು ಎಂದು ತಿಳಿಸಿದೆ.











Click it and Unblock the Notifications