IPPB GDS Recruitment 2025: 348 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ವೇತನ ಎಷ್ಟು ಗೊತ್ತಾ?
IPPB GDS Recruitment 2025: ಸರ್ಕಾರಿ ಹುದ್ದೆ ಪಡೆಯಬೇಕೆಂಬುದು ಬಹುತೇಕರ ಕನಸಾಗಿರುತ್ತದೆ. ಹಾಗಾದ್ರೆ, ಮತ್ತೇಕೆ ತಡ ಇಲ್ಲಿ ಖಾಲಿ ಇರುವ 348 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಹಾಗಾದ್ರೆ ಎಲ್ಲಿ? ಹಾಗೂ ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ದಾಖಲೆಗಳು ಬೇಕು ಹಾಗೂ ಅರ್ಹತೆಗಳೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ಒಟ್ಟು 348 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚನೆ ಪ್ರಕಾರ, ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 9ರಿಂದ ಪ್ರಾರಂಭ ಆಗಿದ್ದು,ಅಕ್ಟೋಬರ್ 29ರ ವರೆಗೆ ಅವಕಾಶ ಇದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ippbonline.com ಅಥವಾ IBPS ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು.

ಈ ನೇಮಕಾತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪಡೆದಿರಬೇಕು. ಯಾವುದೇ ವಿಭಾಗದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಕೆ ಮಾಡುವವರು ಕನಿಷ್ಠ 20 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಆಗಸ್ಟ್ 1, 2025ರಂತೆ ವಯಸ್ಸನ್ನು ಲೆಕ್ಕ ಹಾಕಲಾಗುತ್ತದೆ. ಸರ್ಕಾರಿ ನಿಯಮಗಳ ಪ್ರಕಾರ ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ ಎಂದು ತಿಳಿಸಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರ ಪದವಿ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿದಾರರ ಅಂಕಗಳು ಹೆಚ್ಚಿದರೆ, ಬ್ಯಾಂಕ್ ಆನ್‌ಲೈನ್ ಪರೀಕ್ಷೆಯನ್ನು ಸಹ ನಡೆಸಬಹುದು. ಇನ್ನು ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ 30,000 ರೂಪಾಯಿವರೆಗೆ ವೇತನ ಸಿಗಲಿದೆ. ಜೊತೆಗೆ ತುಟ್ಟಿಭತ್ಯೆ, ಪ್ರಯಾಣ ಭತ್ಯೆ ಮತ್ತು ವಸತಿ ಮುಂತಾದ ಇತರ ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುವುದು. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂಪಾಯಿ ಆಗಿದ್ದು, ಆನ್‌ಲೈನ್‌ನಲ್ಲಿ ಸಲ್ಲಿಕೆ ಮಾಡಬಹುದು.
ಗಮನಿಸಬೇಕಾದ ಪ್ರಮುಖ ಅಂಶಗಳು
* ವಯೋಮಿತಿ: ಕನಿಷ್ಠ 20 ವರ್ಷ
* ವಿದ್ಯಾರ್ಹತೆ: ಪದವಿ
* ಪರೀಕ್ಷೆ ವಿಧಾನ: ಆನ್‌ಲೈನ್
* ಮಾಸಿಕ ವೇತನ: 30,000 ರೂಪಾಯಿ
* ಅರ್ಜಿ ಶುಲ್ಕ: 750 ರೂಪಾಯಿ
ಅರ್ಜಿ ಸಲ್ಲಿಕೆ ವಿಧಾನಗಳು
* ಅಧಿಕೃತ ವೆಬ್‌ಸೈಟ್ ippbonline.com
* ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಇರಲಿದೆ
* ಅಭ್ಯರ್ಥಿಗಳು ಬ್ಯಾಂಕ್‌ನ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು
* ಬಳಿಕ ನಿಮ್ಮ ವೈಯಕ್ತಿಕ ವಿವರವನ್ನು ಭರ್ತಿ ಮಾಡಿ
* ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ
* ನಿಮ್ಮ ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ
* ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ
* ಅರ್ಜಿ ನಮೂನೆಯನ್ನು ಸಲ್ಲಿಕೆ ಮಾಡಿದ ನಂತರ, ಅಭ್ಯರ್ಥಿಗಳು ಅದನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕಾಗುತ್ತದೆ.












Click it and Unblock the Notifications