IRCTC Recruitment 2025: ಮಾಸಿಕ ₹30,000 ವೇತನದ ಹುದ್ದೆಗಳಿಗೆ ಅರ್ಜಿ ಆಹ್ವಾನ
IRCTC Recruitment 2025: ಭಾರತೀಯ ರೈಲ್ವೆಯ ಪ್ರವಾಸೋದ್ಯಮ ವಿಭಾಗವಾದ ಐಆರ್‌ಸಿಟಿಸಿಯಲ್ಲಿ ಖಾಲಿಯಿರುವ 6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಗಮನಿಸಬೇಕಾದ ಅಂಶಗಳು ಹಾಗೂ ಆಯ್ಕೆ ಆದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಸಂಪರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಭಾರತೀಯ ಪ್ರವಾಸೋದ್ಯಮ ವಿಭಾಗವಾಗಿರುವ ಐಆರ್‌ಸಿಟಿಸಿ ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಹುದ್ದೆಗಳು ಖಾಲಿ ಇದ್ದು, ಹಾಸ್ಪಿಟಾಲಿಟಿ/ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ಬಿಎಸ್ಸಿ ಅಥವಾ ಬಿಬಿಎ/ಎಂಬಿಎ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕೆಂದರೆ ಗರಿಷ್ಠ 28 ವರ್ಷಗಳು ಆಗಿರಬೇಕಾಗುತ್ತದೆ. ಇನ್ನು ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಮಾರ್ಚ್ 4ರೊಳಗೆ ಅಧಿಕೃತ ವೆಬ್‌ಸೈಟ್ irctc.comಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಫಾರ್ಮ್ ಅನ್ನು ಡೌನ್‌ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 6 ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು, 2 ಹುದ್ದೆಗಳು ಸಾಮಾನ್ಯ ವರ್ಗ, 3 ಒಬಿಸಿ ಮತ್ತು 1 ಹುದ್ದೆ ಎಸ್‌ಸಿ ವರ್ಗಕ್ಕೆ ಮೀಸಲಿವೆ.
ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 28 ವರ್ಷಗಳು ಆಗಿದ್ದು, ಗರಿಷ್ಠ ವಯೋಮಿತಿಯಲ್ಲಿ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ. ಅಂಗವಿಕಲ ವರ್ಗಕ್ಕೆ ಗರಿಷ್ಠ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ನೀಡಲಾಗಿದೆ.
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 30,000 ರೂಪಾಯಿ ವೇತನ ಸಿಗಲಿದೆ. ವೇತನದ ಹೊರತಾಗಿ ಇತರ ಭತ್ಯೆಗಳನ್ನು ಸಹ ನೀಡಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಯಶಸ್ವಿಯಾದ ನಂತರ ಅವರನ್ನು ನೇಮಕ ಮಾಡಿಕೊಳ್ಳಲಾಗುವುದು. ಈ ನೇಮಕಾತಿಯನ್ನು 2 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಮಾಡಲಾಗುತ್ತದೆ.
234 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ 234 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಗಮನಿಸಬೇಕಾದ ಅಂಶಗಳು ಹಾಗೂ ಆಯ್ಕೆಯಾದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಅರ್ಜಿ ಸಲ್ಲಿಕೆ ಜನವರಿ 15, 2025ರಿಂದ ಆರಂಭವಾಗಿದ್ದು, ಫೆಬ್ರವರಿ 14 ಕೊನೆ ದಿನ ಆಗಿತ್ತು. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್ ಮತ್ತು ಕೆಮಿಕಲ್ ವಿಭಾಗಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಜೂನಿಯರ್ ಎಕ್ಸಿಕ್ಯೂಟಿವ್ (ಇನ್‌ಸ್ಟ್ರುಮೆಂಟೇಶನ್)- 37 ಹುದ್ದೆಗಳು, ಜೂನಿಯರ್ ಎಕ್ಸಿಕ್ಯೂಟಿವ್ (ಕೆಮಿಕಲ್)- 02, ಜೂನಿಯರ್ ಎಕ್ಸಿಕ್ಯೂಟಿವ್ (ಮೆಕ್ಯಾನಿಕಲ್)- 130, ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್)- 65 ಸೇರಿದಂತೆ ಒಟ್ಟು 234 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿತ್ತು.
ಆಯ್ಕೆಯಾದ ಅಭ್ಯರ್ಥಿಗಳುಗೆ ಮಾಸಿಕ ವೇತನ 30,000-1,20,000 ರೂಪಾಯಿವರೆಗೆ ಇರಲಿದೆ. ವಯೋಮಿತಿ ವಿಚಾರಕ್ಕೆ ಬಂದರೆ, 25 ವರ್ಷದೊಳಗಿನವರು ಅರ್ಜಿ ಸಲ್ಲಿಕೆ ಮಾಡಬಹುದಾಗಿತ್ತು. ಅಭ್ಯರ್ಥಿಗಳು 3 ವರ್ಷ ಡಿಪ್ಲೋಮಾ ಇನ್ ಇನ್‌ಸ್ಟ್ರುಮೆಂಟೇಶನ್ ಇಂಜಿನಿಯರ್, ಕೆಮಿಕಲ್ ಇಂಜಿನಿಯರ್, ಮೆಕನಿಕಲ್ ಇಂಜಿನಿಯರ್, ಎಲೆಕ್ಟ್ರಿಕಲ್ ಇಂಜಿನಿಯರ್ ಪದವಿ ಪೂರ್ಣಗೊಳಿಸಿದವರಿಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು.












Click it and Unblock the Notifications