ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ಮತ್ತೊಂದು ಅಕ್ರಮ ಬಯಲು; ಆಯ್ಕೆ ಪಟ್ಟಿ ರದ್ದು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 22: ಕರ್ನಾಟಕ ಲೋಕಸೇವಾ ಆಯೋಗದ ಮತ್ತೊಂದು ಅಕ್ರಮ ಬಯಲಾಗಿದೆ. ಎಫ್‌ಡಿಎ ಮತ್ತು ಎಸ್‌ಡಿಎ ಪರೀಕ್ಷೆಯಲ್ಲಿ ಆಯ್ಕೆಯಾದ 20 ಅಭ್ಯರ್ಥಿಗಳ ಆಯ್ಕೆಯನ್ನು ರದ್ದುಗೊಳಿಸಲು ಗೃಹ ಇಲಾಖೆ ಪತ್ರವನ್ನು ಬರೆದಿದೆ.

2018ರಲ್ಲಿ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ), ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಪರೀಕ್ಷೆ ನಡೆದಿತ್ತು. ಇದರಲ್ಲಿ ಆಯ್ಕೆಯದ 20 ಅಭ್ಯರ್ಥಿಗಳ ಅಕ್ರಮ ಬಯಲಾಗಿದೆ. ಅಭ್ಯರ್ಥಿಗಳು ಕಾನೂನು ಕ್ರಮವನ್ನು ಎದುರಿಸಬೇಕಾಗಿದೆ.

ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ

ಗೃಹ ಇಲಾಖೆ ರಾಜ್ಯ ಸರ್ಕಾರಕ್ಕೆ 2018ರ ಪರೀಕ್ಷೆಯಲ್ಲಿ ಆಯ್ಕೆಯಾದ 20 ಅಭ್ಯರ್ಥಿಗಳನ್ನು ಕೈಬಿಡಿ ಎಂದು ಪತ್ರ ಬರೆದಿದೆ. ವಿವಿಧ ಇಲಾಖೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಇವರುಗಳು ಕೆಲಸ ಕಳೆದುಕೊಳ್ಳಲಿದ್ದಾರೆ.

ಅಭ್ಯರ್ಥಿಗಳಿಗೆ ಸೂಚನೆ; ಕೆಎಸ್ಆರ್‌ಟಿಸಿಯ ನೇಮಕಾತಿ ತಾತ್ಕಾಲಿಕ ಸ್ಥಗಿತ ಅಭ್ಯರ್ಥಿಗಳಿಗೆ ಸೂಚನೆ; ಕೆಎಸ್ಆರ್‌ಟಿಸಿಯ ನೇಮಕಾತಿ ತಾತ್ಕಾಲಿಕ ಸ್ಥಗಿತ

ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ದೂರುಗಳು ಬಂದಿದ್ದವು. ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದಾಗ ಅಕ್ರಮ ನಡೆದಿರುವುದು ಖಚಿತವಾಗಿದ್ದು, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಆರೋಗ್ಯ ಇಲಾಖೆ; ತಾತ್ಕಾಲಿಕವಾಗಿ ನೇಮಕಾತಿ ಆದವರಿಗೆ ಸಿಹಿ ಸುದ್ದಿ ಆರೋಗ್ಯ ಇಲಾಖೆ; ತಾತ್ಕಾಲಿಕವಾಗಿ ನೇಮಕಾತಿ ಆದವರಿಗೆ ಸಿಹಿ ಸುದ್ದಿ

2018ರಲ್ಲಿ ಪರೀಕ್ಷೆ ನಡೆದಿತ್ತು

2018ರಲ್ಲಿ ಪರೀಕ್ಷೆ ನಡೆದಿತ್ತು

ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗಳಿಗೆ ಕೆಪಿಎಸ್‌ಸಿ 2018ರಲ್ಲಿ ಲಿಖಿತ ಪರೀಕ್ಷೆ ನಡೆಸಿತ್ತು. ಕಲಬುರಗಿ ಮತ್ತು ಬೆಳಗಾವಿಯ ಗೋಕಾಕ್‌ನ ಒಂದೇ ಕೋಣೆಯಲ್ಲಿ ಪರೀಕ್ಷೆ ಬರೆದ ಎಲ್ಲರೂ ಆಯ್ಕೆಯಾಗಿದ್ದರು. ಈ ಪರೀಕ್ಷೆಯಲ್ಲಿ ಅಕ್ರಮ ಆಗಿದೆ ಎಂಬ ದೂರು ಬಂದಿತ್ತು.

ಪರಿಷ್ಕೃತ ಪಟ್ಟಿ ಪ್ರಕಟವಾಗಲಿದೆ

ಪರಿಷ್ಕೃತ ಪಟ್ಟಿ ಪ್ರಕಟವಾಗಲಿದೆ

ಬೆಂಗಳೂರಿನ ಅಶೋಕ ನಗರ ಠಾಣೆ ಪೊಲೀಸರು ಈ ಕುರಿತು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳನ್ನು ಆಯ್ಕೆ ಪಟ್ಟಿಯಿಂದ ತೆಗೆದು ಹಾಕಿ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಒಳಾಡಳಿತ ಇಲಾಖೆ ಕಾರ್ಯದರ್ಶಿ ಡಿ. ರೂಪಾ ಮೌದ್ಗಿಲ್ ಕೆಪಿಎಸ್‌ಸಿ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಕೆಲಸ ಕಳೆದುಕೊಳ್ಳಲಿದ್ದಾರೆ

ಕೆಲಸ ಕಳೆದುಕೊಳ್ಳಲಿದ್ದಾರೆ

ಕಲಬುರಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ದೀಪಕ್ ನಾಗ್ ಪುಣ್ಯಶೆಟ್ಟಿ ಅವರು ನೀಡಿದ ದೂರಿನಿಂದಾಗಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ. ಈಗ ಅಭ್ಯರ್ಥಿಗಳು ಕೆಲಸ ಕಳೆದುಕೊಳ್ಳುವ ಜೊತೆಗೆ ಕಾನೂನು ಕ್ರಮ ಎದುರಿಸಲಿದ್ದಾರೆ. ಇದರಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುವುದು ತಪ್ಪಿದೆ.

ಒಂದೇ ಕೋಣೆ, ಒಂದೇ ಊರು

ಒಂದೇ ಕೋಣೆ, ಒಂದೇ ಊರು

ಪರೀಕ್ಷೆ ಬರೆದು ಆಯ್ಕೆಯಾದ ಬಹುತೇಕರು ಒಂದೇ ಊರಿನವರು ಮತ್ತು ಒಂದೇ ಕೋಣೆಯಲ್ಲಿ ಪರೀಕ್ಷೆ ಬರೆದಿದ್ದಾರೆ. ಎಲ್ಲರ ಕ್ರಮ ಸಂಖ್ಯೆಗಳು ಸಹ ಅಕ್ಕ-ಪಕ್ಕವೇ ಇದ್ದವು. ಕಲಬುರಗಿಯ ಗ್ಲೋಬಲ್ ಪರೀಕ್ಷಾ ಕೇಂದ್ರದಲ್ಲಿ ಎಲ್ಲರೂ ಪರೀಕ್ಷೆ ಬರೆದಿದ್ದರು. ಎಲ್ಲರೂ ಒಟ್ಟಿಗೆ ಆಯ್ಕೆಯಾಗಿದ್ದು ಚರ್ಚೆಗೆ ಕಾರಣವಾಗಿತ್ತು.

English summary
Bengaluru police found irregularities in Karnataka Public Service Commission (KPSC) FDA and SDA exam 2018. Home ministry writes government to cancel 20 people posting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X