ಇಸ್ರೋ ಸಂಸ್ಥೆಯಲ್ಲಿ 86 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 26: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) 2019-20ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ 86 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಟೆಕ್ನಿಷಿಯನ್, ಡ್ರಾಫ್ಟ್ಸ್ ಮನ್, ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 13ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)
ಒಟ್ಟು ಹುದ್ದೆ: 86
ಹುದ್ದೆ ಹೆಸರು: Technician B, Draughtsman B & Technical Assistant
ಉದ್ಯೋಗ ಸ್ಥಳ : ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 13.09.2019

ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ವಯೋಮಿತಿ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿ: 18 ರಿಂದ 35 ವರ್ಷ (13.09.2019 ಅನ್ವಯ)
ಎಸ್ ಸಿ/ ಎಸ್ಟಿ: ಗರಿಷ್ಠ ವಯೋಮಿತಿಯಲ್ಲಿ 05 ವರ್ಷ ವಿನಾಯಿತಿ,
ಒಬಿಸಿ: ಗರಿಷ್ಠ ವಯೋಮಿತಿಯಲ್ಲಿ 03 ವರ್ಷ ವಿನಾಯಿತಿ,
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ.
ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ: 250ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24.08.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13.09.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.












Click it and Unblock the Notifications