218 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಐಟಿಬಿಪಿ
ಬೆಂಗಳೂರು, ನವೆಂಬರ್ 07 : ಐಟಿಬಿಪಿ 218 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 27 ನವೆಂಬರ್ 2018 ಕೊನೆಯ ದಿನವಾಗಿದೆ.
ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.
ಮಾನ್ಯತೆ ಪಡೆದ ಬೋರ್ಡ್‌ನಿಂದ ಮೆಟ್ರಿಕ್ಯೂಲೇಷನ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 23 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿಯ ಜೊತೆಗೆ 100 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ : 21700-69100 ಪ್ರತಿ ತಿಂಗಳು. ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications