73 ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಐಟಿಬಿಪಿ
ಬೆಂಗಳೂರು, ಅಕ್ಟೋಬರ್ 10 : ಐಟಿಬಿಪಿ 73 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 23 ಅಕ್ಟೋಬರ್ 2018 ಕೊನೆಯ ದಿನವಾಗಿದೆ.
ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ) ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೈಕಾಲಜಿಯನ್ನು ಪ್ರಮುಖ ವಿಷಯವಾಗಿ ವ್ಯಾಸಂಗ ಮಾಡಿದವರು, ಬ್ಯಾಚುಲರ್ ಆಫ್ ಟೀಚಿಂಗ್ ವ್ಯಾಸಂಗ ಮಾಡಿದವರು ಅರ್ಜಿ ಹಾಕಬಹುದು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 23 ಅಕ್ಟೋಬರ್ 2018ಕ್ಕೆ ಅನ್ವಯವಾಗುವಂತೆ.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 25500-81000 ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಮಹಿಳಾ/ನಿವೃತ್ತ ಯೋಧರಿಗೆ ಯಾವುದೇ ಶುಲ್ಕಗಳು ಇಲ್ಲ.
ಲಿಖಿತ ಮತ್ತು ದೈಹಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications