ಐಡ್ಲ್ಯುಎಸ್‌ಟಿ ನೇಮಕಾತಿ; ಫಾರೆಸ್ಟ್‌ ಗಾರ್ಡ್‌ ಹುದ್ದೆಗಳು

ಬೆಂಗಳೂರು, ಫೆಬ್ರವರಿ 17; ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ, ಬೆಂಗಳೂರು ಫಾರೆಸ್ಟ್ ಗಾರ್ಡ್‌ ಹುದ್ದೆಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದೆ.

ಒಟ್ಟು ಮೂರು ಹುದ್ದೆಗಳಿದ್ದು, ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರೂ. ವೇತನ ನೀಡಲಾಗುತ್ತದೆ.

ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ, ಬೆಂಗಳೂರು ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವ ಬೋರ್ಡ್‌ನಿಂದ 12ನೇ ತರಗತಿ ಉತ್ತಿರ್ಣರಾಗಿರಬೇಕು.

IWST Bengaluru Invited Applications For Forest Guard Post

ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ ನೇಮಕಾತಿ ನಿಯಮದಂತೆ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 27 ವರ್ಷಗಳು. 31 ಮಾರ್ಚ್ 2022ಕ್ಕೆ ಅನ್ವಯವಾಗುವಂತೆ.

ದೈಹಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಸ್ವಯಂ ದೃಢಿಕೃತ ದಾಖಲಾತಿಗಳ ಜೊತೆ ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ; Director, Institute of Wood Science & Technology, 18th Cross, Malleswaram, Bengaluru ­560003.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ iwst.icfre.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಎಷ್ಟು?; ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ, ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವಿಧಾನಸಭೆಯಲ್ಲಿ ಯಮಕನಮರಡಿಯ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಪ್ರಶ್ನೆ ಮಾಡಿದ್ದಾರೆ.

ಸರ್ಕಾರ ಈ ಪ್ರಶ್ನೆಗೆ ಉತ್ತರ ನೀಡಿದೆ. 2021-22ನೇ ಸಾಲಿನಲ್ಲಿ 1171 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಸರ್ಕಾರ ಮಂಜೂರಾತಿ ನೀಡಿದೆ. ಸದರಿ ಹುದ್ದೆಗಳಲ್ಲಿ 686 ಹುದ್ದೆಗಳಿಗೆ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ವೈದ್ಯಕೀಯ ಮತ್ತು ದಾಖಲಾತಿಗಳ ಪರೀಕ್ಷೆ ನಡೆಸುವ ಪ್ರಕ್ರಿಯೆ ಜಾರಿಯಲ್ಲಿದೆ.

ಉಳಿದಂತೆ 402 ಹುದ್ದೆಗಳಿಗೆ ಶೀಘ್ರದಲ್ಲೇ ಲಿಖಿತ ಪರೀಕ್ಷೆ ನಡೆಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಹಾಗೂ 20 ಪಿ. ಎಸ್‌. ಐ (ಕ್ರೀಡೆ) ಹುದ್ದೆಗಳ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಕೆ. ಎಸ್. ಐ. ಎಸ್. ಎಫ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿರುತ್ತದೆ ಎಂದು ಸರ್ಕಾರ ಹೇಳಿದೆ. 2021-22ನೇ ಸಾಲಿನಲ್ಲಿ 4000 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸರ್ಕಾರ ಮಂಜೂರತಿ ನೀಡಿದೆ.

ಅರ್ಜಿ ಆಹ್ವಾನ; ಕೊಡಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಬರುವ ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ಆಯಾ ಹುದ್ದೆಗಳು ಖಾಲಿ ಇವೆ. ಈ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಹೊಸದಾಗಿ ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಈ ಸಂಸ್ಥೆಯಲ್ಲಿ 0-6 ವರ್ಷದ ಅನಾಥ, ಪರಿತ್ಯಜಿಸಲ್ಪಟ್ಟ ಹಾಗೂ ಒಪ್ಪಿಸಲ್ಪಟ್ಟ ಪಾಲನೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಿದ್ದಾರೆ.

ಈ ಮಕ್ಕಳನ್ನು ಪೋಷಿಸಲು 2 ಆಯಾ ಹುದ್ದೆಗಳ ಅವಶ್ಯಕತೆ ಇರುತ್ತದೆ. ಅರ್ಹ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಇದಕ್ಕಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕೆಲಸಕ್ಕೆ ಬರುವ ಸಿಬ್ಬಂದಿಗಳು ಹಗಲು, ರಾತ್ರಿ ಪಾಳಿ ರೀತಿಯಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವವರು ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಕಾವೇರಿ ಲೇಔಟ್, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08272-200450.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+