ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ; ಜೂನ್ 24ರೊಳಗೆ ಅರ್ಜಿ ಹಾಕಿ

ಚಿಕ್ಕಮಗಳೂರು, ಜೂನ್ 15; ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿಕ್ಕಮಗಳೂರು ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 24/6/2022 ಕೊನೆಯ ದಿನವಾಗಿದೆ.

ಸರ್ಕಾರಿ ಕೆಲಸದ ಅವಧಿಯಲ್ಲಿ ಮಾತ್ರ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು (ಬೆಳಗ್ಗೆ 10 ರಿಂದ ಸಂಜೆ 5.30). ಸರ್ಕಾರಿ ರಜೆ ದಿನಗಳಲ್ಲಿ ಅರ್ಜಿ ಸ್ವೀಕಾರವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Jal Jeevan Mission Apply For Various Post At Chikkamagaluru

ಹುದ್ದೆಗಳ ವಿವರ; ಕಿರಿಯ ಸಮಾಲೋಚಕರು 12 (ಸಹಾಯಕ ಇಂಜಿನಿಯರ್). ಅಭ್ಯರ್ಥಿ ವಯೋಮಿತಿ 30 ವರ್ಷ ಮೀರಿರಬಾರದು. ಕನಿಷ್ಠ 2 ವರ್ಷದ ಅನುಭವ ಹೊಂದಿರಬೇಕು. ಅಭ್ಯರ್ಥಿಗೆ ವೇತನ 40,000 ರೂ.ಗಳು.

ಸಾರ್ವಜನಿಕರೊಂದಿಗೆ ಕನ್ನಡ ಭಾಷೆಯಲ್ಲಿ ವ್ಯವಹರಿಸಲು ಅಭ್ಯರ್ಥಿ ಪರಿಜ್ಞಾನ ಹೊಂದಿರಬೇಕು. ಅಭ್ಯರ್ಥಿ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಎಐಸಿಟಿಇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಗೊಂಡಿರಬೇಕು. ದೂರ ಶಿಕ್ಷಣ/ ಡಿಪ್ಲೊಮಾ ವಿದ್ಯಾರ್ಹತೆ ಪರಿಗಣನೆ ಇಲ್ಲ.

ಕಿರಿಯ ಸಮಾಲೋಚಕರು 6 (ಕಿರಿಯ ಇಂಜಿನಿಯರ್). ಅಭ್ಯರ್ಥಿ ವಯೋಮಿತಿ 28 ವರ್ಷ ಮೀರಿರಬಾರದು. ಕನಿಷ್ಠ 2 ವರ್ಷದ ಅನುಭವ ಹೊಂದಿರಬೇಕು. ಅಭ್ಯರ್ಥಿಗೆ ವೇತನ 30,000 ರೂ.ಗಳು.

ಅರ್ಜಿ ಹಾಕುವ ಅಭ್ಯರ್ಥಿಗಳು ಜನರೊಂದಿಗೆ ಕನ್ನಡ ಭಾಷೆಯಲ್ಲಿ ವ್ಯವಹರಿಸಲು ಜ್ಞಾನ ಹೊಂದಿರಬೇಕು. ಅಭ್ಯರ್ಥಿ ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾವನ್ನು ಎಐಸಿಟಿಇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಗೊಂಡಿರಬೇಕು. ದೂರ ಶಿಕ್ಷಣದ ಮೂಲಕ ಪಡೆದ ಡಿಪ್ಲೊಮಾ ಅರ್ಹವಲ್ಲ.

Jal Jeevan Mission Apply For Various Post At Chikkamagaluru

ಅಭ್ಯರ್ಥಿಗೆ ಷರತ್ತುಗಳು

* ಆಯ್ಕೆಯಾದ ಅಭ್ಯರ್ಥಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ. ನೇಮಕಾತಿ ಅವಧಿ 11 ತಿಂಗಳು. ಕಾರ್ಯಕ್ಷಮತೆ ಪರಿಶೀಲನೆ ನಡೆಸಿ ಮುಂದುವರೆಸುವ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತೀರ್ಮಾನ ಕೈಗೊಳ್ಳುತ್ತಾರೆ.

* ದಾಖಲಾತಿ ಪರಿಶೀಲನೆ ಬಳಿಕ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲು ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ. ಒಟ್ಟು ಅಂಕಗಳು 125. ಕನಿಷ್ಠ ವಿದ್ಯಾರ್ಹತೆಯಾದ ಪದವಿಯಲ್ಲಿ ಪಡೆದ ಶೇಕಡ ಅಂಕಗಳನ್ನೇ ಒಟ್ಟು ಅಂಕವಾಗಿ ಪರಿಗಣಿಸಲಾಗುತ್ತದೆ.

* ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್) ಹುದ್ದೆಗೆ ವಿದ್ಯಾರ್ಹತೆಯಾಗಿ ಪದವಿ ವಿದ್ಯಾರ್ಹತೆಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಮೆರಿಟ್ ಆಧಾರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅಂತಹ ಅಭ್ಯರ್ಥಿ ಆಯ್ಕೆಯನ್ನು ರದ್ದುಗೊಳಿಸುವುದು ಮತ್ತು ಮೆರಿಟ್ ಆಧಾರದಲ್ಲಿ ನಂತರದ ಜ್ಯೇಷ್ಠತೆ ಪಟ್ಟಿಯಲ್ಲಿರುವ ಅಭ್ಯರ್ಥಿ ಪರಿಗಣಿಸಲಾಗುತ್ತದೆ.

* ಕಿರಿಯ ಸಮಾಲೋಚಕರು (ಕಿರಿಯ ಇಂಜಿನಿಯರ್) ಹುದ್ದೆಗೆ ಡಿಪ್ಲೊಮಾ ವಿದ್ಯಾರ್ಹತೆ ಮಾತ್ರ ಪರಿಗಣಿಸಲಾಗುತ್ತದೆ. ಬಿ. ಇ. ಪದವಿಯನ್ನು ಪರಿಗಣಿಸಲಾಗುವುದಿಲ್ಲ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು https://chikkamagaluru.nic.in ವೆಬ್ ಸೈಟ್ ಮೂಲಕ ಸಲ್ಲಿಸಬೇಕು. ಖುದ್ದಾಗಿ, ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವಿಲ್ಲ ಎಂದು ನೇಮಕಾತಿ ಪ್ರಕಟಣೆ ಸ್ಪಷ್ಟಪಡಿಸಿದೆ.

ಕರ್ನಾಟಕ ಸರ್ಕಾರದ ನಿಯಮಗಳ ಅನ್ವಯ ಪಾರದರ್ಶಕ ಆಯ್ಕೆ ವಿಧಾನ ಆಳವಡಿಸಲಾಗಿದೆ. ಯಾವುದೇ ಅಭ್ಯರ್ಥಿಯು ಮೇಲೆ ವಿವರಿಸಿರುವ ಷರತ್ತುಗಳನ್ನು ಹಾಗೂ ನಿಬಂಧನೆಗಳನ್ನು ಪಾಲಿಸದಿದ್ದಲ್ಲಿ ಸದರಿ ಅಭ್ಯರ್ಥಿ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಮೇಲ್ಕಂಡ ಎಲ್ಲಾ ದಾಖಲಾತಿ ಪರಿಶೀಲನೆ ಹಾಗೂ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುವ ಪ್ರಕ್ರಿಯೆಯನ್ನು ಮಾನವ ಸಂಪನ್ಮೂಲ ಸಂಸ್ಥೆಯು ನಿರ್ವಹಣೆ ಮಾಡಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ವಿಭಾಗ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08262-295795ಮ ಇ-ಮೇಲ್ ವಿಳಾಸ [email protected].

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+