ಜಯದೇವ ಆಸ್ಪತ್ರೆ ನೇಮಕಾತಿ ವಿವರ, ಹೈ-ಕರ್ನಾಟಕಕ್ಕೆ ಆದ್ಯತೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 19 : ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ವಿಶೇಷವಾಗಿ ಹೈದರಾಬಾದ್-ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅವಕಾಶ ನೀಡುತ್ತಿದೆ. ಸೆಪ್ಟೆಂಬರ್ 9ರಂದು ಸಂದರ್ಶನ ನಡೆಯುತ್ತಿದೆ.

ಅಸಿಸ್ಟೆಂಟ್ ಪ್ರೊಫೆಸರ್, ಸ್ಟಾಫ್‌ ನರ್ಸ್, ಡಯಟಿಷಿಯನ್ ಸೇರಿದಂತೆ 30ಕ್ಕೂ ಹೆಚ್ಚು ಹುದ್ದೆಗಳಿಗೆ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.[ನೇಮಕಾತಿ ಆದೇಶ ಇಲ್ಲಿದೆ]

Jayadeva Institute of Cardiology recruitment notification

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1500 ರೂ., ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 1000 ರೂ.ಗಳು. ಸಂದರ್ಶನ ಸೆಪ್ಟೆಂಬರ್ 9ರಂದು ಬೆಂಗಳೂರಿನಲ್ಲಿ ನಡೆಯಲಿದೆ.[ಚಿತ್ರಗಳು : ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ]

ಸಂದರ್ಶನ ನಡೆಯುವ ವಿಳಾಸ : ಬೋರ್ಡ್‌ ರೂಂ, 1ನೇ ಮಹಡಿ, ಜಯದೇವ ಹೃದ್ರೋಗ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಬೆಂಗಳೂರು.

ಹೆಚ್ಚಿನ ವಿವರಗಳಿಗೆ : www.jayadevacardiology.com

ಉದ್ಯೋಗವಕಾಶಗಳು

* ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಕಿರಿಯ ಮಾರ್ಗದಾಳು ಮತ್ತು ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ 25/8/2016. [ವಿವರಗಳು ಇಲ್ಲಿವೆ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Sri Jayadeva Institute of Cardiology invited applications for various post. Priority for Hyderabad-Karnataka region candidates. Walking interview scheduled on September 9, 2016.
Please Wait while comments are loading...