JNCASR Recruitment 2023: ಬೆಂಗಳೂರಿನಲ್ಲಿ ಅರ್ಹರಿಗೆ ಕೆಲಸ ಖಾಲಿ ಇದೆ, ವಿವರ
ಬೆಂಗಳೂರು, ಅಕ್ಟೋಬರ್ 15: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ತಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿಯೇ ಕೆಲಸ ಹುಡುಕುತ್ತಿದ್ದ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ನಲ್ಲಿ ಒಂದು ತಾಂತ್ರಿಕ ಸಹಾಯಕ (ಇನ್ಸ್ಟ್ರುಮೆಂಟ್ ಆಪರೇಟರ್) ಹುದ್ದೆ ಖಾಲಿ ಇದೆ. ಆಸಕ್ತರು ಅಭ್ಯರ್ಥಿಗಳು ಇದೇ ಅಕ್ಟೋಬರ್ 17ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ನೇಮಕಾತಿ ಪ್ರಕ್ರಿಯೆ ವಿವರ
ಸಂಸ್ಥೆ ಹೆಸರು: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್
ಹುದ್ದೆಯ ಹೆಸರು: ಟೆಕ್ನಿಕಲ್ ಅಸಿಸ್ಟೆಂಟ್
ಖಾಲಿ ಹುದ್ದೆ ಸಂಖ್ಯೆ: 1
ಪೋಸ್ಟಿಂಗ್: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: ಅಕ್ಟೋಬರ್ 17
ವೇತನ: ನಿಗದಿ ಮಾಡಿಲ್ಲ.
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್‌ಸಿ, ಪಿಎಚ್.ಡಿ ಪೂರ್ಣಗೊಳಿಸಿರಬೇಕು ಎಂದು ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆ ತಿಳಿಸಿದೆ.
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸುವವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. ಸದ್ಯ ವೇತನ ನಿಗದಿ ಮಾಡಲಾಗಿಲ್ಲ.

ಆಯ್ಕೆ ಪ್ರಕ್ರಿಯೆ ಹೇಗೆ
ಮೊದಲು ಅಭ್ಯರ್ಥಿಗಳಿಗೆ ಟೆಕ್ನಿಕಲ್ ಡಿಸ್ಕಶನ್ ನಡೆಸಿದ ನಂತರ ಪರ್ಸನಲ್ ಇಂಟರ್ಯಾಕ್ಷನ್ ಮಾಡಿ ಸಂದರ್ಶನ ನಡೆಸಲಾಗುವುದು. ಅದರಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುವುದು.
ಅರ್ಜಿ ಸಲ್ಲಿಕೆ ವಿವರ
ಸೂಕ್ತ ದಾಖಲೆಗಳ ಸಹಿತ ಭರ್ತಿ ಮಾಡಿದ ಅರ್ಜಿಯನ್ನು ಅಭ್ಯರ್ಥಿಗಳು ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕಿದೆ. ಅಧಿಸೂಚನೆ ಇದೇ ಅಕ್ಟೊಬರ್ 12ಕ್ಕೆ ಬಿಡುಗಡೆ ಆಗಿದ್ದು, ಅಕ್ಟೋಬರ್ 17ರೊಳಗೆ ಅರ್ಜಿ ಹಾಕಬೇಕಿದೆ ಎಂದ ತಿಳಿಸಲಾಗಿದೆ.












Click it and Unblock the Notifications