JNCASR Jobs: ಬೆಂಗಳೂರಿನಲ್ಲಿ ಉದ್ಯೋಗ ಖಾಲಿ ಇದೆ, ಡಿಪ್ಲೋಮಾ ಪದವೀಧರರು ಅರ್ಜಿ ಹಾಕಿ
ಬೆಂಗಳೂರು, ಸೆಪ್ಟಂಬರ್ 10: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಸೆಪ್ಟಂಬರ್ 15ರೊಳಗೆ ಆಸಕ್ತರು ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ನಲ್ಲಿ ಫೀಲ್ಡ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಇ ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆ ಆದವರಿಗೆ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುತ್ತದೆ. ನಿಮಗೇ ಬೇಕಾದ ನೇಮಕಾತಿ ಸಲಹೆ, ವಯಸ್ಸಿನ ಮಿತಿ, ಅರ್ಜಿ ಶುಲ್ಕ ಸೇರಿದಂತೆ ಇನ್ನಿತರ ನೇಮಕಾತಿ ಮಾಹಿತಿ ಇಲ್ಲಿದೆ.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಹುದ್ದೆ ಹೆಸರು: ಫೀಲ್ಡ್ ಅಸಿಸ್ಟೆಂಟ್
ಒಟ್ಟು ಹುದ್ದೆ: ಒಂದು
ಪೋಸ್ಟಿಂಗ್: ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆ ದಿನ: ಸೆಪ್ಟಂಬರ್ 15
ಮಾಸಿಕ ವೇತನ: ನಿಯಮಾನುಸಾರ
ವಿದ್ಯಾರ್ಹತೆ ಏನಿರಬೇಕು?
JNCASR ನೇಮಕಾತಿ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಂಜಿನಿಯರಿಂಗ್ ಹಾಗೂ ಟೆಕ್ನಾಲಜಿಯಲ್ಲಿ ಡಿಪ್ಲೊಮಾ, ಬಿ.ಎಸ್ಸಿ ಪದವಿ ಪಡೆದಿರಬೇಕು ಎಂದು ತಿಳಿಸಲಾಗಿದೆ.
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು, ಅಂದರೆ ಗರಿಷ್ಠ 50 ವರ್ಷ ಒಳಗಿನವರು ಅರ್ಜಿ ಸಲ್ಲಿಸಬೇಕು. ಜಾರಿ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ ಎಂದು ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಂಸ್ಥೆಯು ಯಾವುದೇ ಲಿಖಿತ ಪರೀಕ್ಷೆ ಇಡದೇ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಆಯ್ಕೆ ಆದವರಿಗೆ ಮಾಸಿಕವಾಗಿ ರೂ. 20,000 ರೂ. ವೇತನ ಸಹಿತ ರಾಜಧಾನಿ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ವಿಳಾಸ
ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಸೂಕ್ತ ದಾಖಲಾತಿ ಸಮೇತರಾಗಿ ಭರ್ತಿ ಮಾಡಿದ ಅರ್ಜಿಯನ್ನು ಸಂಸ್ಥೆಯ ಇ-ಮೇಲ್ ವಿಳಾಸ [email protected] ಗೆ ಸೂಕ್ತ ದಿನಾಂಕದ ಒಳಗಾಗಿ ರವಾನಿಸಬೇಕು. ಹೆಚ್ಚಿನ ಮಾಹಿತಿಗೆ ಮೇಲ್ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ.












Click it and Unblock the Notifications