Job Alert: ಡಿಸಿಸಿ ಬ್ಯಾಂಕ್‌ನಲ್ಲಿ 123 SDA ಹುದ್ದೆಗೆ ಅರ್ಜಿ ಆಹ್ವಾನ
ನಿರುದ್ಯೋಗಿ ಯುವಕರಿಗೆ ಸುರ್ವಣ ಅವಕಾಶ. ಸೌತ್ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ (SCDCC Bank)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ ಹಾಗೂ ಕೊನೆಯ ದಿನಾಂಕದ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ದಕ್ಷಿಣ ಕನ್ನಡದ ನಿರುದ್ಯೋಗಿ ಯುವಕರಿಗೆ ಇದು ಸುವರ್ಣವಕಾಶವಾಗಿರಲಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರೈಸಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಇದರ ಲಾಭವನ್ನು ಪಡೆಯಬಹುದಾಗಿದೆ. ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಖಾಲಿ ಇರುವ 123 ಎಸ್‌ಡಿಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜುಲೈ 18, 2024 ಆಗಿದೆ. ಉದ್ಯಗ ಸ್ಥಳ ಮಂಗಳೂರು ಆಗಿರಲಿದೆ.

ಡಿಸಿಸಿ ಬ್ಯಾಂಕ್‌ನ ಅಧಿಕೃತ ಸೂಚನೆಯ ಪ್ರಕಾರ ಅಭ್ಯರ್ಥಿಯ ಪ್ರಕಾರ, ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದಿರುವ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ
ಸೌತ್ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಸೂಚನೆಯಂತೆ ಸಾಮಾನ್ಯ ಅಭ್ಯರ್ಥಿಗಳ ವಯಸ್ಸು 35 ವರ್ಷ ಆಗಿರಬೇಕು. ಇನ್ನು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ. ಇನ್ನು ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗೆ ಐದು ವರ್ಷದ ಸಡಿಲಿಕೆ ನೀಡಲಾಗಿದೆ. 24,910 ರಿಂದ 55,655 ರೂಪಾಯಿ ವೇತನವರಲಿದೆ.
ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು 1180 ರೂ ಶುಲ್ಕವನ್ನು ಪಾವತಿಸಬೇಕು. ಅಲ್ಲದೆ ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳು 590 ರೂ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಹಣವನ್ನು ಅಭ್ಯರ್ಥಿಗಳು ಡಿಡಿ ಮೂಲಕ ಪಾವಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು https://scdccbank.com/recruitment/ ವೆಬ್ ಸೈಟ್‌ಗೆ ಭೇಟಿ ನೀಡಿ ಅಗತ್ಯ ದಾಖಲೆಗಳು ಹಾಗೂ ಸ್ವ ವಿವರವನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಸಲಾಗುವುದು.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಕಂಡ ವಿಳಾಸಕ್ಕೆ ಕಳುಹಿಸುವುದು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಸೌತ್ ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್
ಉತ್ಕೃಷ್ಟ ಸಹಕಾರಿ ಸೌಧ
ಪಿ.ಬಿ. ಸಂಖ್ಯೆ 721
ಕೊಡಿಯಾಲ್ಬೈಲ್
ಮಂಗಳೂರು - 575003












Click it and Unblock the Notifications