ದಾವಣಗೆರೆ ಜಿಲ್ಲೆಯ ಈ ಸಂಸ್ಥೆಯಲ್ಲಿ ಉದ್ಯೋಗಾಧಾರಿತ ತರಬೇತಿ-ಮಾಹಿತಿ, ವಿವರ
ದಾವಣಗೆರೆ, ಮಾರ್ಚ್, 05: ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯಲ್ಲಿ ಎಸ್.ಸಿ.ಪಿ, ಟಿ.ಎಸ್.ಪಿ. ಯೋಜನೆಯಡಿ 16ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಶಿಷ್ಯವೇತನದೊಂದಿಗೆ ವಿವಿಧ ಕೋರ್ಸ್‍ಗಳಲ್ಲಿ ಉಚಿತ ತರಬೇತಿ ನೀಡಲಾಗುತ್ತದೆ.
ಎಸ್‌ಎಸ್ಎಲ್‌ಸಿ, ಪಿಯುಸಿ, ಡಿಪ್ಲೊಮೋ, ಐಟಿಐ, ಬಿ.ಇ. ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಆಟೋಮೇಷನ್ ಕಂಟ್ರೋಲ್, ಇಂಟರ್‌ನೆಟ್ ಆಪ್ ಥಿಂಗ್ಸ್, ಇಂಂಜಿನಿಯರಿಂಗ್, 3ಡಿ ಪ್ರಿಂಟಿಂಗ್, ವ್ಯಾಲಿಡೇಷನ್ ಲ್ಯಾಬ್, ರಿಯಾಲಿಟಿ ಲ್ಯಾಬ್, ಪ್ರೊಡಕ್ಟ್ ಡಿಸೈನ್ ಅಂಡ್ ಡೆವೆಲಪ್‌ಮೆಂಟ್, ಸಿ.ಎನ್.ಸಿ ಮಿಲ್ಲಿಂಗ್ ಮಷಿನ್ ಆಪರೇಟರ್, ಸಿ.ಎನ್.ಸಿ ಪ್ರೊಗ್ರಾಮಿಂಗ್, ಆಪರೇಷನ್, ಟರ್ನರ್, ಮಿಲ್ಲರ್, ಗ್ರೈಂಡರ್, ಡಿಸೈನರ್-ಮೆಕಾನಿಕಲ್, ಪ್ರೊಡಕ್ಷನ್ ಇಂಜಿನಿಯರ್, ಟೂಲ್ ರೂಮ್ ಮಷಿನಿಷ್ಟ್ ಕೋರ್ಸ್‍ಗಳಿಗೆ ತರಬೇತಿ ನೀಡಲಾಗುವುದು. ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ. ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ ಹರಿಹರ, ಮೊಬೈಲ್ ನಂಬರ್ 90353729971, 9611025932, 8884488202 ಸಂಖ್ಯೆಗಳಿಗೆ ಸಂಪರ್ಕಿಸಲು ಪ್ರಾಂಶುಪಾಲರು ತಿಳಿಸಿದ್ದಾರೆ.












Click it and Unblock the Notifications