ಕೊಪ್ಪಳ; ಜ. 25ರಂದು ಜಾಬ್ ಡ್ರೈವ್, ಅಭ್ಯರ್ಥಿಗಳಿಗೆ ಅರ್ಹತೆಗಳು

ಕೊಪ್ಪಳ, ಜನವರಿ 21: ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಕೊಪ್ಪಳದಲ್ಲಿ ಜನವರಿ 25ರಂದು ಜಾಬ್ ಡ್ರೈವ್ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹರು ಪಾಲ್ಗೊಳ್ಳಬಹುದಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕೊಪ್ಪಳದಲ್ಲಿ ಜನವರಿ 25ರ ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಜಾಬ್‌ಡ್ರೈವ್‌ ಆಯೋಜಿಸಲಾಗಿದೆ. ವಿವಿಧ ಖಾಸಗಿ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

Job Drive In Koppal Employment Exchange Office On January 25

ಜಾಬ್‌ಡ್ರೈವ್‌ಗೆ ಉಚಿತ ಪ್ರವೇಶ. 18 ರಿಂದ 30 ವಯೋಮಿತಿಯ ಪಿಯುಸಿ/ ತತ್ಸಮಾನ, ಡಿಪ್ಲೋಮಾ, ಐಟಿಐ, ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಾಬ್‌ಡ್ರೈವ್‌ನಲ್ಲಿ ಭಾಗವಹಿಸಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇಲ್ಲಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8105693234.

ಉದ್ಯಮಶೀಲತಾಭಿವೃದ್ಧಿ ತರಬೇತಿ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರ ವತಿಯಿಂದ ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗ ಯುವಕ/ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು. ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹೀರಾತು ಮತ್ತು ಮಾರುಕಟ್ಟೆಯ ಕುರಿತು ನೋಂದಣಿ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ. ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಪೂರ್ಣಗೊಂಡಿರಬೇಕು. ಎಲ್ಲಾ ವರ್ಗದ ಆಸಕ್ತರು ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕೊಪ್ಪಳ ಆವರಣ, ನಗರಸಭೆ ಎದುರುಗಡೆ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು.

ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಶನ್ ಕಾರ್ಡ್‌ಗಳ ಜೆರಾಕ್ಸ್ ಪ್ರತಿಗಳು, 2 ಪಾಸ್‌ಪೋರ್ಟ್ ಫೋಟೋಗಳೊಂದಿಗೆ ಜನವರಿ 29ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 6362557332, 6362681190.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+