ಕೊಪ್ಪಳದಲ್ಲಿ ಡಿಸೆಂಬರ್ 13ರಂದು ಜಾಬ್ ಡ್ರೈವ್‌

ಕೊಪ್ಪಳ, ಡಿಸೆಂಬರ್ 10; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಡಿಸೆಂಬರ್ 13ರಂದು ಜಾಬ್ ಡ್ರೈವ್ ಆಯೋಜನೆ ಮಾಡಿದೆ. ಆಸಕ್ತ ಮತ್ತು ಅರ್ಹರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜಾಬ್ ಡ್ರೈವ್ ಆಯೋಜಿಸಲಾಗಿದೆ. ಖಾಸಗಿ ಸಂಸ್ಥೆಗಳು ಪಾಲ್ಗೊಳ್ಳಲಿದ್ದು, ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.

Job Drive In Koppal On December 13 To Fill Various Posts

ಈ ಜಾಬ್ ಡ್ರೈವ್‌ನಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿದ್ದು, ಆಸಕ್ತರು ಭಾಗವಹಿಸಬಹುದು. ಆಸಕ್ತರು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಾಬ್ ಡ್ರೈವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವು ಪಡೆಯಬಹುದಾಗಿದೆ.

ವಿದ್ಯಾರ್ಹತೆಯ ವಿವರಗಳು; ಈ ಜಾಬ್ ಡ್ರೈವ್‌ನಲ್ಲಿ ಪಿಯುಸಿ/ ತತ್ಸಮಾನ, ಐಟಿಐ (ವೆಲ್ಡರ್, ಫಿಟ್ಟರ್, ಎಲೆಕ್ಟ್ರೀಷಿಯನ್), ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಸಕ್ತರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್‌ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಪಾಲ್ಗೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 8105693234.

ಗಂಗಾವತಿಯಲ್ಲಿ ಕೆಲಸ ಖಾಲಿ ಇದೆ; ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಗಂಗಾವತಿಯಲ್ಲಿ ನಡೆಯುತ್ತಿರುವ ವಿದ್ಯುತ್ ಶಿಲ್ಪಿ ವೃತ್ತಿಗೆ 2023-24ನೇ ಸಾಲಿನಲ್ಲಿ ಪ್ರವೇಶ ಪಡೆದ ತರಬೇತಿದಾರರಿಗೆ ತರಬೇತಿಯನ್ನು ನೀಡಲು ಎಲೆಕ್ಟ್ರಿಷಿಯನ್ 7 ಅತಿಥಿ ಬೋಧಕರ ಅವಶ್ಯಕತೆ ಇದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿನವಾಗಿದೆ. ಐಟಿಐ, ಎಟಿಎಸ್, ಡಿಇಇ, ಬಿಇ ಎಲೆಕ್ಟ್ರಿಕಲ್ ವಿದ್ಯಾರ್ಹತೆ ಹೊಂದಿರುವ, ಕನಿಷ್ಠ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಂಸ್ಥೆಗೆ ಅರ್ಜಿ ಸಲ್ಲಿಸಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಂಗಾವತಿ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9448259832.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+