Job Fair 2024: ರಾಜ್ಯದ ಈ ಜಿಲ್ಲೆಯಲ್ಲಿ ಸೆ.13ಕ್ಕೆ ಬೃಹತ್‌ ಉದ್ಯೋಗ ಮೇಳ

ಸೆಪ್ಟೆಂಬರ್‌ 13ರಂದು ಬೆಂಗಳೂರಿನ ಸಮೀಪದ ಈ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಬೃಹತ್‌ ಉದ್ಯೋಗ ಮೇಳ ನಡೆಯಲಿದೆ. ಸೆಪ್ಟೆಂಬರ್‌ 13ರ ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಉದ್ಯೋಗ ಮೇಳ ನಡೆಯಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಜಿಲ್ಲಾ ಕೌಶಲ್ಯ ಮಿಷನ್‌ ವತಿಯಿಂದ (ಸಹಯೋಗದಲ್ಲಿ) ಜಿಲ್ಲಾ ಮಟ್ಟದ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಇದೇ 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜಿ ಕಾಲೇಜಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ 50ಕ್ಕಿಂತ ಹೆಚ್ಚು ನಿಯೋಜಕರು ಹಾಗೂ ಕಂಪನಿಗಳು ಭಾಗವಹಿಸಲಿವೆ. ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿವೆ.

Job Fair 2024 Bengaluru Rural District Held Job Fair on Sep 13

ಉದ್ಯೋಗ ಮೇಳಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ?

ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ,ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾಹರ್ತೆ ಮಾಡಿರುವ ಅರ್ಹ ಅಭ್ಯರ್ಥಿಗಳು ತಮ್ಮ ಸ್ವ ವಿವರೊಂದಿಗೆ (ಬಯೋಡಾಟಾ)ದೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ.

ಉದ್ಯೋಗಾಕಾಂಕ್ಷಿಗಳ ನೋಂದಣಿ: ಅಭ್ಯರ್ಥಿಗಳು https://bangalorerural.nic.in/en/job-fair/ ಈ ಲಿಂಕ್ ಮೂಲಕ ಇಲ್ಲವೇ ಕ್ಯೂ ಆರ್ ಕೋಡ್‌ ಮೂಲಕ ಆನ್‌ಲೈನ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಅಭ್ಯರ್ಥಿಗಳು ಸಮೀಪದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡುವ ಮೂಲಕವೂ ಸಹ ನೀವು ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ವರೆಗೆ ಕಾಯದೆ ಕೂಡಲೇ ಅರ್ಜಿಗಳನ್ನು ಸಲ್ಲಿಸಬಹುದು. ಆನ್‌ಲೈನ್‌ನ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸಲಿದ್ದು, ಆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ವಿಜ್ಞಾನ ಮತ್ತು ಎಂಜಿನಿಯರಿಂಗ್‌ನಲ್ಲಿ ಪಿ.ಎಚ್‌ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್‌.ಟಿ - ಪಿ.ಎಚ್‌.ಡಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಶಿಷ್ಯ ವೇತನವನ್ನು ಪಡೆದುಕೊಳ್ಳಲು 35 ವರ್ಷ ವಯೋಮಿತಿ ಇದೆ. ಇನ್ನು ಮಹಿಳೆಯರು, ಅಂಗವಿಕಲರಿಗೆ, ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷದ ವರೆಗೆ ಮೀಸಲಾತಿ ಇರಲಿದೆ. ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ ಶೇ.30 ಪ್ರತಿಶತ ಮೀಸಲಾತಿ ಇರಲಿದೆ. ಇನ್ನು ಆನ್‌ಲೈನ್‌ ಮೂಲಕ ಸೆಪ್ಟೆಂಬರ್‌ 30 ಕೊನೆಯ ದಿನಾಂಕವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+