Job Fair 2024: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿ.ವಿಯಲ್ಲಿ ಉದ್ಯೋಗಾವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶವಿದೆ. ಇದು 2024-25 ವರ್ಷಕ್ಕೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಪೂರ್ಣ ಪ್ರಮಾಣದ ಅಧ್ಯಾಪಕರ ಹುದ್ದೆಗಳಿಗೆ ಸಂಬಂಧಿಸಿದಾಗಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ಗದಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. 2024-25ರ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾನಿಲಯದಲ್ಲಿ P.G/ U.G ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ವಿವಿಧ ಕೋರ್ಸ್‌ಗಳನ್ನು ಕಲಿಸಲು ಈ ಅರ್ಜಿ ಆಹ್ವಾನ ಮಾಡಲಾಗಿದೆ. ಗುತ್ತಿಗೆ ಆಧಾರದ ಮೇಲೆ ಇರಲಿದ್ದು, ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ಸಿಹಿಸುದ್ದಿಯೊಂದನ್ನು ಕೊಟ್ಟಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ಗದಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ವಿವಿಧ ಕೋರ್ಸ್‌ಗಳನ್ನು ಮಾಡಿರುವವರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಕೋರ್ಸ್ ಹಾಗೂ ಅರ್ಹತೆಯ ವಿವರ ಇಲ್ಲಿದೆ
ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್: ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ ಸಾರ್ವಜನಿಕ ಆರೋಗ್ಯ ವಿಷಯದಲ್ಲಿ (Public Health) ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳನ್ನು ಗಳಿಸಿರುವ ಅಭ್ಯರ್ಥಿಗಳು (M.P.H) NET/K-SET ಅರ್ಹತಾ ಪರೀಕ್ಷೆಗಳಲ್ಲಿ ಅರ್ಹತೆ ಹಾಗೂ ಸಂಬಂಧಿತ ವಿಷಯಗಳಲ್ಲಿ Ph.D ಮಾಡಿರುವವರು ಇದಕ್ಕೆ ಅರ್ಜಿ ಸಲ್ಲಿಸುವುದಕ್ಕೆ ಅರ್ಹರಾಗಿರುತ್ತಾರೆ.
ಗ್ರಾಮೀಣಾಭಿವೃದ್ಧಿಗೆ (Rural Management) ಅಥವಾ ಕೃಷಿ ವ್ಯವಹಾರ ನಿರ್ವಹಣೆಗೆ ಸಂಬಂಧಿಸಿದಂತೆ ಎಂ.ಬಿ.ಎ: ಈ ಕೋರ್ಸ್ ಮಾಡಿರುವವರು ಸಹ ಅರ್ಜಿ ಸಲ್ಲಿಸಲು ಅವಕಾಶ ಇದೆ. M.B.A. (ಹಣಕಾಸು ಮತ್ತು ಮಾರ್ಕೆಟಿಂಗ್ ಎರಡರಲ್ಲೂ ಪರಿಣಿತಿ ಹೊಂದಿರುವವರು) ನಲ್ಲಿ ಕನಿಷ್ಠ 55% ಅಂಕಗಳನ್ನು ಗಳಿಸಿದ್ದರೆ. ಹಾಗೂ NET / K-SET ಅರ್ಹತೆ ಮತ್ತು ಸಂಬಂಧಿತ ವಿಷಯದಲ್ಲಿ Ph.D ಮಾಡಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
B.Sc(ಕೃಷಿ ವ್ಯಾಪಾರ ಮತ್ತು ಆಹಾರ ಸಂಸ್ಕರಣೆ): ಅಗ್ರಿ ಬಿಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳನ್ನು ಗಳಿಸಿರುವ ಅಭ್ಯರ್ಥಿಗಳು ಇದಕ್ಕೆ ಅರ್ಹರಾಗಿದ್ದಾರೆ. ಅಲ್ಲದೇ B.Sc (ಅಗ್ರಿ) ಪದವಿ, NET/K-SET ಸಂಬಂಧಿತ ವಿಷಯಗಳಲ್ಲಿ ಅರ್ಹತೆ ಮತ್ತು ಸಂಬಂಧಿತ ವಿಷಯದಲ್ಲಿ ಪಿಎಚ್‌ಡಿ ಪದವಿ ಮಾಡಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಸಿವಿ (ಸ್ವವಿವರ), ಶೈಕ್ಷಣಿಕ ಅರ್ಹತಾ ಪ್ರಮಾಣಪತ್ರಗಳು, ಮಾರ್ಕ್ಸ್‌ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳ 2 ಪ್ರತಿ (ಜೆರಾಕ್ಸ್)ಗಳನ್ನು ರಿಜಿಸ್ಟ್ರಾರ್, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ-582101ಕ್ಕೆ ಕಳುಹಿಸಬಹುದಾಗಿದೆ.
ಇನ್ನು ಅರ್ಜಿ ಸಲ್ಲಿಸುವುದಕ್ಕೆ ಡಿಸೆಂಬರ್ 16 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಕೌಶಲ್ಯ ವಿಕಾಸ ಭವನ, ಗ್ರಾಮ ಗಂಗೋತ್ರಿ ಕ್ಯಾಂಪಸ್, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ನಾಗಾವಿ, ಗದಗ-582103 ವಿಳಾಸದಲ್ಲಿ ಸಂದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ website: www.ksrdpru.ac.in. ಗೆ ಭೇಟಿ ನೀಡಿ ಪರಿಶೀಲನೆ ಮಾಡಬಹುದಾಗಿದೆ.












Click it and Unblock the Notifications