ಉಡುಪಿ; ಜೂನ್ 15ರಂದು ಮಿನಿ ಉದ್ಯೋಗ ಮೇಳ

ಉಡುಪಿ, ಜೂನ್ 13; ಉದ್ಯೋಗ ಹುಡುಕುತ್ತಿರುವ ಯುವ ಜನರಿಗೆ ಸಿಹಿಸುದ್ದಿ. ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 15ರ ಗುರುವಾರ ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಗುರುವಾರ ಬೆಳಗ್ಗೆ 10.30ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

Job Fair At Udupi Employment Exchange Office On June 15th

ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಭಾಗವಹಿಸಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದಾಗಿದೆ. ಕರೆ ಮಾಡಲು ದೂರವಾಣಿ ಸಂಖ್ಯೆ 8105618291, 9945856670 ಹಾಗೂ 9901472710.

ಸ್ವ ಉದ್ಯೋಗ ಆರಂಭಿಸಲು ಸಹಾಯಧನ; ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ)ಯಡಿ ಉಡುಪಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವಕ/ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ 50 ಲಕ್ಷ ರೂ. ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ 20 ಲಕ್ಷ ರೂ. ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದೆ. ಯೋಜನಾ ವೆಚ್ಚದ ಮೇಲೆ ಶೇ. 15 ರಿಂದ 35ರ ವರೆಗೆ ಸಹಾಯಧನ ನೀಡಲಾಗುತ್ತದೆ.

ಆಸಕ್ತರು ಅರ್ಜಿಯನ್ನು ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ಹಾಗೂ ಸ್ಕೋರ್ ಕಾರ್ಡ್‌ನಲ್ಲಿಯೂ ಸಂಬಂಧಿಸಿದ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ನಂತರ, ಅರ್ಜಿಯ ಪ್ರಿಂಟ್ಅನ್ನು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಸಲ್ಲಿಕೆ ಮಾಡಬೇಕು.

ಅರ್ಜಿಯನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2575650, 0820-2574855, 080-25665885, 080-25665883 ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+