
ಕಲಬುರಗಿಯಲ್ಲಿ ಉದ್ಯೋಗ ಮೇಳ, ಹೆಸರು ನೋಂದಾಯಿಸಿ
ಕಲಬುರಗಿ, ಜನವರಿ 25; ಕಲಬುರಗಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜಂಟಿಯಾಗಿ ಜನವರಿ 30ರಂದು ಉದ್ಯೋಗ ಮೇಳ ಆಯೋಜನೆ ಮಾಡಿವೆ.
ಆಳಂದ ಉಮರ್ಗಾ ರಸ್ತೆಯ ಶ್ರೀ ಸತ್ಯಸಾಯಿ ಐಟಿಐ ಕಾಲೇಜಿನಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲಾ ಕೌಶಲ್ಯ ಮಿಷನ್‌ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ.
ಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ; ಜ.30ರ ತನಕ ಅರ್ಜಿ ಹಾಕಿ
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಐಟಿಐ ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಕೊಪ್ಪಳ; ಜನವರಿ 31ರಂದು ಉದ್ಯೋಗ ಮೇಳ
ಉದ್ಯೋಗ ಮೇಳಕ್ಕೆ ಬರುವಾಗ ಅಭ್ಯರ್ಥಿಗಳು ವಿದ್ಯಾಭ್ಯಾಸದ ಪ್ರಮಾಣಪತ್ರ ಅಥವಾ ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್, ರೆಸ್ಯೂಮ್ 5 ಪ್ರತಿ ಹಾಗೂ ಎರಡು ಭಾವಚಿತ್ರಗಳೊಂದಿಗೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.
ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ, ಬೆಂಗಳೂರಿನಲ್ಲಿ ಕೆಲಸ
ಆಸಕ್ತರು https://skillconnect.kaushalkar.com/candidatereg ವೆಬ್‌ಸೈಟ್‌ದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-225569, 8904122167, 8317384664, 9980398161 ಕರೆ ಮಾಡಬಹುದಾಗಿದೆ.
ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ತಾತ್ಕಾಲಿಕ ಹುದ್ದೆ ನೇಮಕಾತಿಗಾಗಿ ನೇರ ಸಂದರ್ಶನವನ್ನು ಫೆಬ್ರವರಿ 1ರಂದು ಕರೆಯಲಾಗಿದೆ.
ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಆಹಾರ ವಿಜ್ಞಾನ ಹಾಗೂ ಪೋಷಣೆಯಲ್ಲಿ ಸ್ನಾತಕೋತ್ತರ ಪದವಿ, ಪಿಹೆಚ್‍ಡಿ ಹಾಗೂ ನೆಟ್ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಗಳು http://www.uasd.edu ದಲ್ಲಿ ಅರ್ಜಿ ನಮೂನೆ ಪಡೆದು, ಎರಡು ಪ್ರತಿಗಳೊಂದಿಗೆ ಫೆಬ್ರವರಿ 1ರಂದು ಬೆಳಗ್ಗೆ 10.30 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ; ವಿದ್ಯಾಧಿಕಾರಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ.
ಸೇನೆ ನೇಮಕಾತಿಗೆ ತರಬೇತಿಗೆ ಅರ್ಜಿ ಆಹ್ವಾನ: ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ 3 (ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡುತ್ತಿದೆ.
ಈ ತರಬೇತಿ ಉಚಿತ ಊಟ ಮತ್ತು ವಸತಿಯನ್ನು ಒಳಗೊಂಡಿದೆ. ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರು ಫೆಬ್ರವರಿ 15ರ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 805077000 ಸಂಪರ್ಕಿಸಬಹುದು.