• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಾಗಲಕೋಟೆಯಲ್ಲಿ ಫೆಬ್ರವರಿ 27, 28ರಂದು ಉದ್ಯೋಗ ಮೇಳ

|
Google Oneindia Kannada News

ಬಾಗಲಕೋಟೆ, ಫೆಬ್ರವರಿ 25 : ಬಾಗಲಕೋಟೆಯಲ್ಲಿ ಫೆಬ್ರವರಿ 27 ಮತ್ತು 28ರಂದು ಉದ್ಯೋಗ ಮೇಳ ನಡೆಯಲಿದೆ. 4,835 ಉದ್ಯೋಗಾಕಾಂಕ್ಷಿಗಳು, 45 ಹೆಚ್ಚು ಕಂಪನಿಗಳು ಈಗಾಗಲೇ ಮೇಳದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಸಿಕೊಂಡಿವೆ.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಈ ಕುರಿತು ಮಾಹಿತಿ ನೀಡಿದ್ದು, "ವಿದ್ಯಾಗಿರಿಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿರುವ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಕಾಲ ಉದ್ಯೋಗ ಮೇಳ ನಡೆಯಲಿದೆ" ಎಂದು ಹೇಳಿದ್ದಾರೆ.

ವಿವಿಧ ಇಲಾಖೆಗಳಲ್ಲಿ ಹುದ್ದೆ ಕಡಿತ ಮಾಡಲಿದೆ ಸರ್ಕಾರವಿವಿಧ ಇಲಾಖೆಗಳಲ್ಲಿ ಹುದ್ದೆ ಕಡಿತ ಮಾಡಲಿದೆ ಸರ್ಕಾರ

ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಫೆಬ್ರವರಿ 27ರಂದು ಬೆಳಗ್ಗೆ 10 ಗಂಟೆಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಚಾಲನೆ ನೀಡಲಿದ್ದಾರೆ. ಮೇಳದಲ್ಲಿ ಅಂದಾಜು 5 ಸಾವಿರ ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಒಟ್ಟು 4835 ಆಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಕರ್ನಾಟಕ ಪೊಲೀಸ್ ನೇಮಕಾತಿ; 54 ಹುದ್ದೆಗಳಿಗೆ ಅರ್ಜಿ ಹಾಕಿಕರ್ನಾಟಕ ಪೊಲೀಸ್ ನೇಮಕಾತಿ; 54 ಹುದ್ದೆಗಳಿಗೆ ಅರ್ಜಿ ಹಾಕಿ

ಹೆಸರು ನೋಂದಣಿಗೆ ಫೆಬ್ರವರಿ 25 ಕೊನೆ ದಿನವಾಗಿತ್ತು. ಅನಿವಾರ್ಯ ಕಾರಣಗಳಿಂದ ಆನ್‍ಲೈನ್‍ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳು ಉದ್ಯೋಗ ಮೇಳ ನಡೆಯುವ ಸ್ಥಳದಲ್ಲೇ ಸ್ಥಾಪಿಸಲಾಗುವ ಕೌಂಟರ್‌ಗಳಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

ಮೈಸೂರಿನಲ್ಲಿ ಕೆಲಸ ಖಾಲಿ ಇದೆ; 16 ಹುದ್ದೆಗೆ ಅರ್ಜಿ ಹಾಕಿಮೈಸೂರಿನಲ್ಲಿ ಕೆಲಸ ಖಾಲಿ ಇದೆ; 16 ಹುದ್ದೆಗೆ ಅರ್ಜಿ ಹಾಕಿ

ವಿವಿಧ ಕಂಪನಿಗಳ ಮಾಹಿತಿ ಪ್ರಕಾರ ಅಂದಾಜು 2800 ಕ್ಕೂ ಅಧಿಕ ವಿವಿಧ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗತ್ತದೆ. 7ನೇ ತರಗತಿ, ಎಸ್ಎಸ್ಎಲ್‌ಸಿ ವಿವಿಧ ಪದವಿ ಹಾಗೂ ಡಿಪ್ಲೋಮಾ ಸೇರಿದಂತೆ ವೃತ್ತಿಪರ ಕೋರ್ಸಗಳನ್ನು ಪೂರೈಸಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ವಿದ್ಯಾರ್ಹತೆಯ ನಕಲು ದಾಖಲಾತಿಗಳು, ಅನುಭವ ಪ್ರಮಾಣ ಪತ್ರ ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಹಾಜರಾಗಬಹುದಾಗಿದೆ. ಜಿಲ್ಲೆಯ ಬೇರೆ ಬೇರೆ ಊರಿನಿಂದ ಬರುವ ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ಎಲ್ಲ ಬಸ್ಸುಗಳು ವಿದ್ಯಾಗಿರಿಯ ಇಂಜಿನಿಯರಿಂಗ್ ಕಾಲೇಜು ಸರ್ಕಲ್‍ಗೆ ನಿಲುಗಡೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

English summary
Two days job fair organized in Bagalkot district. Job fair will be held on February 27 and 28, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X