ಬಳ್ಳಾರಿ; ಜೂನ್ 19ರ ಸೋಮವಾರ ಮಿನಿ ಉದ್ಯೋಗ ಮೇಳ

ಬಳ್ಳಾರಿ, ಜೂನ್ 18; ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 19ರ ಸೋಮವಾರ ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೂಲ ಆಧಾರ್ ಕಾರ್ಡ್‌ ಪ್ರತಿ, ರೆಸ್ಯೂಮ್ ಮತ್ತುಇತರ ದಾಖಲೆಗಳ ಜೊತೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

ಸೋಮವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ತನಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ 6ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಿದ್ದಾರೆ.

ವಿದ್ಯಾರ್ಹತೆಯ ವಿವರ; ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಭಾಗವಹಿಸಿ, ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರೆ ನೀಡಲಾಗಿದೆ.

Job Fair In Ballari District Employment Exchange Office On June 20

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೊಗ ವಿನಿಮಯ ಕಚೇರಿ ಅಥವಾ ದೂರವಾಣಿ ಸಂಖ್ಯೆ 08392-273988, ಮೊಬೈಲ್ ಸಂಖ್ಯೆ 8073365184, 9019692898, 7892971984 ಸಂಪರ್ಕಿಸಬಹುದು.

ಕುವೈತ್‍ನಲ್ಲಿ ಮನೆ ಕೆಲಸಕ್ಕಾಗಿ ನೋಂದಣಿ; ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಕುವೈತ್ ದೇಶದಲ್ಲಿ ಮನೆ ಕೆಲಸಕ್ಕಾಗಿ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಅರ್ಹ ಮಹಿಳಾ ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ. ಎಸ್. ಬಸವರಾಜಪ್ಪ ತಿಳಿಸಿದ್ದಾರೆ.

ಹೆಸರು ನೋಂದಣಿ ಮಾಡುವ ಮಹಿಳೆಯರಿಗೆ ವಯೋಮಿತಿ 30 ರಿಂದ 39 ವರ್ಷಗಳು. ಅನುಭವಿಗಳು ಹಾಗೂ ಹೊಸಬರು ನೋಂದಣಿ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ವೇತನ 32,000 ರಿಂದ 34,800ವರೆಗೆ ಇರುತ್ತದೆ.

ವಿಸಾ, ವಿಸಾ ಸ್ಟಾಂಪಿಂಗ್, ವಿಮಾನ ಟಿಕೆಟ್, ಪಿಸಿಸಿ, ಪಿಡಿಓಟಿ, ಎಮಿಗ್ರೇಷನ್ಸ್ ಕ್ಲಿಯರೆನ್ಸ್ ಊಟ ಮತ್ತು ವಸತಿ ಸೌಲಭ್ಯ ಹಾಗೂ ಆರೋಗ್ಯ ರಕ್ಷಣೆ, ವಿಮೆ ಎಲ್ಲವೂ ಸಂಪೂರ್ಣ ಉಚಿತವಾಗಿರುತ್ತದೆ ಎಂದು ತಿಳಿಸಲಾಗಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು https://kvtsdc.com ವೆಬ್‌ಸೈಟ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಅಥವಾ ಮೊಬೈಲ್ ಸಂಖ್ಯೆ 8073852104, 9964502514 ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+