Job Fair: ನವೆಂಬರ್ 12ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ

ಬಳ್ಳಾರಿ, ನವೆಂಬರ್ 09: ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗಾಗಿ ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಆಸಕ್ತ, ಅರ್ಹರು ಅಗತ್ಯ ದಾಖಲೆಗಳ ಜೊತೆ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 12ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಿದೆ.

Job Fair In Ballari Scheduled For November 12

ಈ ಕುರಿತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ. ಎಸ್. ಹಟ್ಟಪ್ಪ ಮಾಹಿತಿ ನೀಡಿದ್ದಾರೆ. ಈ ಉದ್ಯೋಗ ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್‌ ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊಬೈಲ್ ಸಂಖ್ಯೆ 9742718891, 9663263086, 9900827768 ಸಂಪರ್ಕಿಸಬಹುದು.

ಧಾರವಾಡದಲ್ಲಿ ನೇರ ಸಂದರ್ಶನ: ಧಾರವಾಡದ ಕೃಷಿ ಮಹಾ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹಾಗೂ ಅರೆಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.

ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ನವೆಂಬರ್ 12ರಂದು ಕೃವಿವಿ ಕುಲಸಚಿವರ ಸಂದರ್ಶನ ಕೊಠಡಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ www.uasd.edu ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

ತರಬೇತಿಗೆ ಅರ್ಜಿ ಆಹ್ವಾನ: ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2025ರ ಜನವರಿಯಿಂದ ಡಿಸೆಂಬರ್ 31ರ ವರೆಗೆ (12 ತಿಂಗಳು) ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಕರೆಯಲಾಗಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 15ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು.

ಕೆಪಿಎಸ್‌ಸಿ ಪರೀಕ್ಷೆ ತರಬೇತಿ: ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ನವೆಂಬರ್ 16ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರು ನೋಂದಾಯಿಸಬೇಕು.

ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+