ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ; ಡಿಸೆಂಬರ್ 23ರಂದು ಉದ್ಯೋಗ ಮೇಳ

|
Google Oneindia Kannada News

ಬೆಳಗಾವಿ, ಡಿಸೆಂಬರ್ 22; ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಗುರುವಾರ ಬೆಳಗಾವಿಯಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಬೆಳಗಾವಿಯಲ್ಲಿರುವ ಕೆ. ಎಲ್. ಎಸ್ ಗೊಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಪಂಚಾಯತ್ ರಾಜ್ ಇಲಾಖೆ ನೇಮಕಾತಿ; ಬೆಂಗಳೂರಲ್ಲಿ ಕೆಲಸ ಪಂಚಾಯತ್ ರಾಜ್ ಇಲಾಖೆ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣ ಪತ್ರ, ವಿದ್ಯಾಭ್ಯಾಸದ ಪ್ರಮಾಣ ಪತ್ರದ ಝೆರಾಕ್ಸ್‌ ಪ್ರತಿ, 2 ಭಾವಚಿತ್ರಗಳು ಮತ್ತು ಕನಿಷ್ಠ 5 ರೆಸ್ಯೂಮ್‌ನೊಂದಿಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಸಿಎಸ್‌ಜಿ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ಅರ್ಜಿ ಹಾಕಿ ಸಿಎಸ್‌ಜಿ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ಅರ್ಜಿ ಹಾಕಿ

Job Fair In Belagavi On December 23

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳು https://skillconnect.kaushalkar.com/app/jobfair ಮೂಲಕ ನೋಂದಣಿ ಮಾಡಿಕೊಳ್ಳಬೇಕು. ರೆಸ್ಯೂಮ್ ಕಳಿಸಲು ವಿಳಾಸ Ksdc.recruitmentgmail.com ಇ-ಮೇಲ್ ವಿಳಾಸಕ್ಕೆ ಕಳಿಸಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ +918277895931 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಶಿಕ್ಷಕರ ನೇಮಕಾತಿ; ಸಿಹಿ ಸುದ್ದಿ ಕೊಟ್ಟ ಸಚಿವ ಬಿ. ಸಿ. ನಾಗೇಶ್‌ ಶಿಕ್ಷಕರ ನೇಮಕಾತಿ; ಸಿಹಿ ಸುದ್ದಿ ಕೊಟ್ಟ ಸಚಿವ ಬಿ. ಸಿ. ನಾಗೇಶ್‌

ಮೈಸೂರು ಮೃಗಾಲಯದಲ್ಲಿ ಕೆಲಸ ಖಾಲಿ ಇದೆ; ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಲು ಬಯೊಲಜಿಸ್ಟ್ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಎಂಎಸ್ಸಿ ಫಾರೆಸ್ಟರಿ/ ವೈಲ್ಡ್ ಲೈಫ್ ಮ್ಯಾನೇಜ್‌ಮೆಂಟ್/ಝೂವಾಲಜಿ/ ವೈಲ್ಡ್‌ ಲೈಫ್‌ ಬಯೋಲಜಿ ವಿಷದಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ವಯೋಮಿತಿ 28 ವರ್ಷದೊಳಗೆ.

ಆಯ್ಕೆಯಾದ ಅಭ್ಯರ್ಥಿಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮಾಸಿಕ ಕ್ರೋಡೀಕೃತ ವೇತನ ರೂ. 18,000. ಅನುಭವಸ್ಥ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28/12/2021ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಮೂಲ ದಾಖಲಾತಿಗಳು, ದೃಢೀಕೃತ ನಕಲು ಪ್ರತಿಯೊಂದಿಗೆ ಸಂದರ್ಶನಕ್ಕೆ ಆಗಮಿಸಬೇಕು ಎಂದು ಸೂಚಿಸಲಾಗಿದೆ.

ನೇರ ಸಂದರ್ಶನ ನಡೆಯುವ ಸ್ಥಳ; ಉಪ ಅರಣ್ಯ ಸಂರಕ್ಷಣಾಧಿಕಾಗಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು, ಶ್ರೀ ಚಾಮರಾಜೇಂದ್ರ ಮೃಗಾಲಯ, ಮೈಸೂರು.

ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಹಾಕಿ; ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಶಿವಮೊಗ್ಗದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 31ಕಡೆಯ ದಿನವಾಗಿದೆ. ಡಿಟಿಡಿಎಂ/ ಡಿಪಿಎಂ, ಬಿ.ಇ & ಎಂ.ಟೆಕ್ (ಮೆಕ್ಯಾನಿಕಲ್), ಬಿ.ಇ/ ಎಂ.ಟೆಕ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. ಸಿಎ 38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ 577 222 ಇವರನ್ನು ಸಂಪರ್ಕಿಸಬಹುದಾಗಿದೆ.

ಅರ್ಹರಿಂದ ಅರ್ಜಿ ಆಹ್ವಾನ; ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ಅರ್ಹ ತರಬೇತುದಾರರು/ ಸಂಸ್ಥೆಗಳಿಂದ ಅರ್ಜಿ ಕರೆಯಲಾಗಿದೆ. ಕೊಪ್ಪಳ ಜಿಲ್ಲೆಯ 6 ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಕರಾಟೆ, ಜೂಡೋ, ಟೆಕ್ವೆಂಟೋ ಇತ್ಯಾದಿ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಬೇಕಾಗಿದೆ.

ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದಿರುವ ಬಾಲಕಿಯರಿಗೆ ಮಾತ್ರ ಈ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಸಂಸ್ಥೆಯು ಹಾಗೂ ತರಬೇತುದಾರರು ಸಕ್ಷಮ ಪ್ರಾಧಿಕಾರದಿಂದ ನೋಂದಾಯಿಸಿರಬೇಕು. ನುರಿತ ಬ್ಲಾಕ್‌ಬೆಲ್ಟ್ (Black belt) ಮಹಿಳಾ ತರಬೇತಿ ಶಿಕ್ಷಕರನ್ನು ಹೊಂದಿರುವ ಸಂಸ್ಥೆಗಳ ಮೂಲಕ ತರಬೇತಿ ನೀಡಬೇಕು.

ತರಬೇತಿಯ ಕಾರ್ಯಕ್ರಮದ ಕುರಿತು ದೂರ ಬಾರದಂತೆ ಎಚ್ಚರವಹಿಸಿ ಮಕ್ಕಳ ಸುರಕ್ಷತೆ ಮತ್ತು ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಒತ್ತು ನೀಡಿ ಲೋಪವಾಗದಂತೆ ಕ್ರಮವಹಿಸಬೇಕು. ವಾರದಲ್ಲಿ 2 ದಿನಗಳಂತೆ ಮತ್ತು ದಿನಕ್ಕೆ 60 ನಿಮಿಷಗಳಂತೆ ತರಬೇತಿ ನೀಡುವುದು. ಕನಿಷ್ಠ 50 ವಿದ್ಯಾರ್ಥಿನಿಯರಿಗೆ ಒಂದು ಬ್ಯಾಚ್‌ನಂತೆ ತರಬೇತಿ ನೀಡುವುದು ಹಾಗೂ ಸರ್ಕಾರದ ಆದೇಶದ ಷರತ್ತಿನನ್ವಯ ತರಬೇತಿಯನ್ನು ನೀಡಬೇಕು.

ಅರ್ಜಿ ಸಲ್ಲಿಸಲು ಡಿಸೆಂಬರ್ 24 ಕೊನೆಯ ದಿನವಾಗಿದ್ದು, ಅರ್ಹ ಆಸಕ್ತ ತರಬೇತುದಾರರು/ ಸಂಸ್ಥೆಯವರು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಕಾರ್ಯಾಲಯದಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು.

English summary
Job fair organized in Belagavi on December 23, 2021. There no entry fee to attend job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X