ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿಯಲ್ಲಿ ಫೆಬ್ರವರಿ 28, 29ರಂದು ಉದ್ಯೋಗ ಮೇಳ

|
Google Oneindia Kannada News

ಬೆಂಗಳೂರು, ಫೆಬ್ರವರಿ 26 : ಬೆಳಗಾವಿಯಲ್ಲಿ ಫೆಬ್ರವರಿ 28 ಮತ್ತು 29ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಪಾಲ್ಗೊಳ್ಳುವವರು ಹೆಸರನ್ನು ನೋಂದಾಯಿಸಿಕೊಳ್ಳಲು ವೆಬ್‌ಸೈಟ್‌ ಆರಂಭಿಸಲಾಗಿದೆ.

ಜಿಲ್ಲಾಡಳಿತ ಧಾರವಾಡ ಮತ್ತು ಬೆಳಗಾವಿ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಂಟಿಯಾಗಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿವೆ.

ಬಾಗಲಕೋಟೆಯಲ್ಲಿ ಫೆಬ್ರವರಿ 27, 28ರಂದು ಉದ್ಯೋಗ ಮೇಳ ಬಾಗಲಕೋಟೆಯಲ್ಲಿ ಫೆಬ್ರವರಿ 27, 28ರಂದು ಉದ್ಯೋಗ ಮೇಳ

ಬೆಳಗಾವಿ ನಗರದ ಎಸ್. ಜಿ. ಬಾಳೇಕುಂದ್ರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್‌ನಲ್ಲಿ ಎರಡು ದಿನಗಳ ಉದ್ಯೋಗ ಮೇಳ ನಡೆಯಲಿದೆ. ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು www.belagaviudyogamela.in ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಕೆಎಸ್ಆರ್‌ಟಿಸಿ ನೇಮಕಾತಿ; 3745 ಹುದ್ದೆಗಳ ಭರ್ತಿ ಕೆಎಸ್ಆರ್‌ಟಿಸಿ ನೇಮಕಾತಿ; 3745 ಹುದ್ದೆಗಳ ಭರ್ತಿ

Job Fair In Belagavi On February 28 And 29

ಎಸ್‌ಎಸ್‌ಎಲ್‌ಸಿ (ಉತ್ತೀರ್ಣ/ಅನುತ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಎಂಬಿಎ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಮತ್ತು ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ತಕ್ಷಣ ಕೆಲಸಕ್ಕೆ ಸೇರ ಬಯಸುವ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ 18 ರಿಂದ 35 ವರ್ಷ ವಯೋಮಾನದ ಪುರುಷ, ಮಹಿಳಾ ಮತ್ತು ವಿಶೇಷಚೇತನರು ಮೇಳದಲ್ಲಿ ಭಾಗವಹಿಸಬಹುದು.

ಎರಡು ದಿನದ ಉದ್ಯೋಗ ಮೇಳದಲ್ಲಿ 100ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳಲಿದ್ದು, ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಯನ್ನು ಮಾಡಿಕೊಳ್ಳಲಿವೆ. ಐಟಿ-ಬಿಟಿ, ಆಟೋ ಮೊಬೈಲ್, ಮೆಕ್ಯಾನಿಕಲ್, ಮಾರ್ಕೆಟಿಂಗ್, ಸೇಲ್ಸ್/ರಿಟೇಲ್, ಟೆಲಿಕಾಂ, ಬಿಪಿಓ, ಟೆಕ್ಸ್‌ಟೈಲ್, ಬ್ಯಾಂಕಿಂಗ್, ಫೈನಾನ್ಸ್ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉದ್ಯೋಗವಕಾಶಗಳಿವೆ.

ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಂಡವರು ಬೆಳಗ್ಗೆ 8ಗಂಟೆಗೆ ಸ್ಥಳಕ್ಕೆ ಆಗಮಿಸಿ ಪ್ರವೇಶ ಪತ್ರವನ್ನು ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ.

English summary
Job fair organized in Belagavi on February 28 and 29, 2020. Candidates can resister their name through website.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X