ಹಾಸನ : ಬೇಲೂರಿನಲ್ಲಿ ಜನವರಿ 31ರಂದು ಉದ್ಯೋಗ ಮೇಳ
ಹಾಸನ, ಜನವರಿ 28 : ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಬೇಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಜನವರಿ 31 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವ ಆಯೋಜಿಸಲಾಗಿದೆ. ಹಾಸನ, ಮೈಸೂರು ಮತ್ತು ಬೆಂಗಳೂರಿನ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿವೆ.

ಎಸ್‌ಎಸ್‌ಎಲ್‌ಸಿ/ಪಾಸು/ಫೇಲು,ಪಿಯುಸಿ/ಪದವಿ/ಐಟಿಐ/ಡಿಪ್ಲೊಮೋ/ಎಂಬಿಎ/ನರ್ಸಿಂಗ್/ಇಂಜಿನಿಯರಿಂಗ್ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ಆಧಾರ್ ಕಾರ್ಡ್, ಸ್ವವಿವರವುಳ್ಳ ಬಯೋಡೇಟ ಪ್ರತಿಗಳೊಂದಿಗೆ ಬೇಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಜೆ.ಬಿ.ವಿಜಯಲಕ್ಷ್ಮಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಸಂಪರ್ಕಿಸಬಹುದಾಗಿದೆ.












Click it and Unblock the Notifications