ಬೆಂಗಳೂರಿನಲ್ಲಿ ಫೆಬ್ರವರಿ 17ರಂದು ಉದ್ಯೋಗ ಮೇಳ
ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೆಂಗಳೂರು ಇಲ್ಲಿ ಫೆಬ್ರವರಿ 17ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಬೆಂಗಳೂರು, ಫೆಬ್ರವರಿ 12; ಬೆಂಗಳೂರು ನಗರದಲ್ಲಿ ಫೆಬ್ರವರಿ 17ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 26 ವರ್ಷಗಳ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಬೆಳಗ್ಗೆ 10.30 ರಿಂದ ಸಂಜೆ 4ಯ ತನಕ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಬಿಇ ಮೆಕ್ಯಾನಿಕಲ್ ವಿದ್ಯಾರ್ಹತೆ ಹೊಂದಿರುವ 26 ವರ್ಷಗಳ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳಕ್ಕೆ ಬರುವಾಗ ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ ಹಾಗೂ ಸ್ವ-ವಿವರಗಳೊಂದಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಏಷ್ಯಾಟಿಕ್ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು 560009 ಇವರನ್ನು ಸಂಪರ್ಕಿಸಬಹುದು.
ಉದ್ಯೋಗ ಮೇಳ ನಡೆಯುವ ವಿಳಾಸ; ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತುಮಕೂರು ರಸ್ತೆ, ಬೆಂಗಳೂರು -560 022. (ಮಾಡರ್ನ್ ಬ್ರೆಡ್ ಫ್ಯಾಕ್ಟರಿ ಹಿಂಭಾಗ).
ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಹಾಕಿ; ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ ಯುವತಿಯರಿಗೆ ಎನ್‍ಎಬಿಹೆಚ್‌ನಿಂದ ಮಾನ್ಯತೆ ಪಡೆದ ಹೆಚ್‍ಸಿಜಿಎಲ್ ಹಾಸ್ಪಿಟಲ್ ಮೂಲಕ ಶೇ75ರಷ್ಟು ಉದ್ಯೋಗ ಖಾತರಿಯೊಂದಿಗೆ ತರಬೇತಿ ನೀಡುತ್ತಿದೆ.
10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಮೂರು ತಿಂಗಳ ವಸತಿ ಸಹಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಇಲಾಖೆಯ ವೆಬ್‍ಸೈಟ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 08182-249241/ 22207781/ 9482300400 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications