ಬೆಂಗಳೂರಿನಲ್ಲಿ ಜುಲೈ 15ರಂದು ಉದ್ಯೋಗ ಮೇಳ

Posted By:
Subscribe to Oneindia Kannada

ಬೆಂಗಳೂರು, ಜುಲೈ 13 : ಬೆಂಗಳೂರು ಗ್ರಾಮಾಂತರ ಉದ್ಯೋಗ ವಿನಿಮಯ ಕಚೇರಿ ಜುಲೈ 15ರಂದು ಉದ್ಯೋಗ ಮೇಳವನ್ನು ಆಯೋಜಿಸಿದೆ. 25ಕ್ಕೂ ಹೆಚ್ಚು ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.

ಹೊಸೂರು ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ (ಐಟಿಐ) ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ವಿನಿಮಯ ಕಚೇರಿ ಉದ್ಯೋಗ ಮೇಳ ಆಯೋಜಿಸಿದ್ದು, ಬೆಳಗ್ಗೆ 10 ಗಂಟೆಗೆ ಮೇಳ ಆರಂಭವಾಗಲಿದೆ. [ಕೊಪ್ಪಳದಲ್ಲಿ ಜುಲೈ 16ರಂದು ಕ್ಯಾಂಪಸ್ ಸಂದರ್ಶನ]

job

25ಕ್ಕೂ ಅಧಿಕ ಖಾಸಗಿ ಸಂಸ್ಥೆಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದೆ. ಅರ್ಧದಲ್ಲಿಯೇ ಶಿಕ್ಷಣ ಮೊಟಕುಗೊಳಿಸಿದವರು, ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದವರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. [ಎಸ್ ಬಿಐನಲ್ಲಿ ವಿಶೇಷ ಅಧಿಕಾರಿ ಹುದ್ದೆಗಳಿವೆ, ಅರ್ಜಿ ಹಾಕಿ]

ಪಿಯುಸಿ, ಐಟಿಐ, ಡಿಪ್ಲೋಮಾ, ಪದವೀಧರ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಸ್ವ-ವಿವರಗಳನ್ನು ಹೊಂದಿರುವ ಅರ್ಜಿಯ ಜೊತೆ ಉದ್ಯೋಗ ಮೇಳಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22289668.

ಉದ್ಯೋಗವಕಾಶಗಳು

* ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ಕಿರಿಯ ಸಹಾಯಕ ಗ್ರೇಡ್-2 ಮತ್ತು ಜವಾನರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಕೊನೆಯ ದಿನಾಂಕ 22 ಜುಲೈ 2016. [ವಿವರಗಳು ಇಲ್ಲಿವೆ]

* ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಅಂತಿಮ ದಿನಾಂಕ 2016ರ ಜುಲೈ 21. [ವಿವರಗಳಿಗೆ ಕ್ಲಿಕ್ ಮಾಡಿ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bengaluru rural district employment exchange office organized job fair at Government Industrial Training Institute (ITI) college in Hosur Road on July 15, 2016.
Please Wait while comments are loading...