ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ 'ಉದ್ಯೋಗ ಮೇಳ'

ಬೆಂಗಳೂರು, ಅಕ್ಟೋಬರ್ 19: ಇದೇ ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಖಾಸಗಿ ವಲಯದ 40 ಕ್ಕೂ ಹೆಚ್ಚು ಹೆಸರಾಂತ ಸಂಸ್ಥೆಗಳು ಭಾಗವಹಿಸುತ್ತಿದ್ದು, ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ಸ್ಥಳದಲ್ಲೇ ನೇರವಾಗಿ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಖಾಸಗಿ ನಿಯೋಜಕರುಗಳ ಸಂಯುಕ್ತ ಆಶ್ರಯದಲ್ಲಿ ನಿರುದ್ಯೋಗ ಯುವಕ / ಯುವತಿಯರಿಗೆ ನೇರ ಸಂದರ್ಶನಕ್ಕೆ ಅನುಕೂಲವಾಗುವಂತೆ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

Job Fair In Bengaluru On October 26

ಎಲ್ಲಿ? ಯಾವಾಗ?

ಅಕ್ಟೋಬರ್ 26 ರ ಗುರುವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಸರ್ಕಾರಿ ವಿಜ್ಞಾನ ಕಾಲೇಜು, ನೃಪತುಂಗ ರಸ್ತೆ, ಬೆಂಗಳೂರು - 560 001 ಇಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಅಕ್ಷರಸ್ಥರು, ಅರ್ಧದಲ್ಲಿಯೇ ಶಾಲೆ ಬಿಟ್ಟವರು ಹಾಗೂ ಎಸ್.ಎಸ್.ಎಲ್.ಸಿ. ಫೇಲ್, ಎಸ್.ಎಸ್. ಎಲ್.ಸಿ. ಪಾಸ್, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೊಮಾ (ಎಲ್ಲಾ ಟ್ರೇಡ್ಗಳು) ಮತ್ತು ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ಹೊಂದಿದವರಿಗೆ ಉದ್ಯೋಗ ಅವಕಾಶಗಳು ಲಭ್ಯವಿದೆ.

ಉದ್ಯೋಗಾಕಾಂಕ್ಷಿಗಳು ತಮ್ಮ ವೈಯಕ್ತಿಕ (ಬಯೋಡಾಟಾ) ವಿವರಗಳೊಂದಿಗೆ ಉದ್ಯೋಗ ಮೇಳ ದಲ್ಲಿ ಭಾಗವಹಿಸಿ ಉದ್ಯೋಗ ದೊರೆಯುವ ಸದಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ದೂರವಾಣಿ ಸಂಖ್ಯೆ 22289668, 22261184, 22374582, 22268846 ಹಾಗೂ 22259351 ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+