ಸೆಪ್ಟೆಂಬರ್ 13ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ-ನೋಂದಾಯಿಸಿಕೊಳ್ಳುವುದು ಹೇಗೆ?-ಇಲ್ಲಿದೆ ಮಾಹಿತಿ
Job News: ವಿವಿಧ ಕಂಪನಿಗಳ ವತಿಯಿಂದ ಜಿಲ್ಲಾವಾರು ಉದ್ಯೋಗ ಮೇಳಗಳನ್ನು ಮಾಡಲಾಗುಯತ್ತಿದೆ. ಹಾಗೆಯೇ ಇದೀಗ ಬೆಂಗಳೂರಿನಲ್ಲಿ ನಾಳೆ ಅಂದರೆ ಸೆಪ್ಟೆಂಬರ್ 13ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದರೆ ಎಷ್ಟು ಕಂಪನಿಗಳು ನೋಂದಣಿಯಾಗಿವೆ ಹಾಗೂ ಎಷ್ಟು ಮಂದಿಗೆ ಆಹ್ವಾನ ನೀಡಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ ಏಜೆನ್ಸೀ ವತಿಯಿಂದ 28,840 ಉದ್ಯೋಗಗಳಿಗೆ ಬೇಡಿಕೆಯಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 120 ಕ್ಕೂ ಅಧಿಕ ನಿಯೋಜಕರು/ಕಂಪನಿಗಳು ಹಾಗೂ 15,000 ಉದ್ಯೋಗಾಂಕ್ಷಿಗಳ ಭಾಗವಹಿಸುವ ಸಾಧ್ಯತೆಯಿದೆ. ಇದುವರೆಗೂ ನೇರ ಸಂದರ್ಶನ ಮೂಲಕ ಆಯ್ಕೆಗೆ ಅಂದಾಜು 8,000 ಉದ್ಯೋಗಗಳು ಬೇಡಿಕೆಯಿದೆ ಹಾಗೂ ಏಜೆನ್ಸಿ ಮೂಲಕ ಆಯ್ಕೆಗೆ 20,000 ಉದ್ಯೋಗಕ್ಕೆ ಬೇಡಿಕೆಯಿದೆ ಎಂದು ಹೇಳಿದರು.
ಪ್ರತಿ ಗ್ರಾಮ ಪಂಚಾಯಿತಿಗೆ 100 ಉದ್ಯೋಗಾಂಕ್ಷಿಗಳು ನೋಂದಣಿ ಹಾಗೂ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಗಳಲ್ಲಿ 2000 ದಿಂದ 3000 ಉದ್ಯೋಗಾಂಕ್ಷಿಗಳು ನೋಂದಣಿ ಮಾಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಆನ್ಲೈನ್‌ನಲ್ಲಿ ನೋಂದಾಯಿಸಿಕೊಳ್ಳದ ಉದ್ಯೋಗಾಂಕ್ಷಿಗಳಿಗೆ ಸ್ಥಳದಲ್ಲಿಯೇ ನೋಂದಣಿ ವ್ಯವಸ್ಥೆ ಕಲ್ಪಿಸಿ, ಉದ್ಯೋಗಾಂಕ್ಷಿಗಳ ವಿದ್ಯಾಬ್ಯಾಸಕ್ಕೆ ಅನುಗುಣವಾಗಿ ಕಂಪನಿಗಳ ಬಳಿ ಸಂದರ್ಶನಕ್ಕೆ ತೆರಳಲು ಮಾರ್ಗದರ್ಶನ ಮಾಡಲು ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ನೇಮಿಸಿ. ಉದ್ಯೋಗಾಂಕ್ಷಿಗಳಿಗೆ ನೆರವಾಗಲು ಕಂಪನಿ ವಿವರಗಳು, ಸಂದರ್ಶನಕ್ಕೆ ಹಾಜರಾಗಿ ಬೇಕಾದ ವಿಳಾಸದ ಸೂಚನಾ ಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಉದ್ಯೋಗಮೇಳದಲ್ಲಿ ಭಾಗವಹಿಸಲು ಉದ್ಯೋಗಕಾಂಕ್ಷಿಗಳು https://bangalorerural.nic.in/en/job-fair/5 ನೋಂದಾಯಿಸಿಕೊಳ್ಳಬಹುದಾಗಿದೆ
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್‌ಎಸ್‌ಎಲ್‌ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications