ಸೆ.2ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ
ಬೆಂಗಳೂರು, ಆಗಸ್ಟ್ 26 : ಬೆಂಗಳೂರು ನಗರದಲ್ಲಿ ಸೆ.2ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಮೂರು ಸಾವಿರಕ್ಕೂ ಅಧಿಕ ನೇಮಕಾತಿಗಳು ನಡೆಯಲಿವೆ.
ಸಿಎಂಕೆ ಚಾರಿಟಬಲ್ ವತಿಯಿಂದ ಸೆ.2ರ ಭಾನುವಾರ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಯಾವುದೇ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮೇಳ ನಡೆಯುವ ಸ್ಥಳ : ಏಟ್ರಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಆನಂದ ನಗರ, ಹೆಬ್ಬಾಳ.

ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ : ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಅಪ್ರೆಂಟೀಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯೊಂದಿಗೆ ಐ.ಟಿ.ಐ ನಲ್ಲಿ ಫಿಟ್ಟರ್, ಮಿಷನಿಸ್ಟ್, ಟರ್ನರ್, ವೆಲ್ಡರ್, ಎಲೆಕ್ಟ್ರಿಷಿಯನ್, ಶೀಟ್‍ಮೆಟಲ್ ವರ್ಕರ್, ಫೌಂಡ್ರಿಮೆನ್ ಹಾಗೂ ಪಾಸಾ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷ.
ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಚೇರಿ ಪ್ರಕಟಣೆ ತಿಳಿಸಿದೆ.











Click it and Unblock the Notifications