ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಫೆಬ್ರವರಿ 5 ರಂದು ಉದ್ಯೋಗ ಮೇಳ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಬೆಂಗಳೂರು ನಗರದಲ್ಲಿ ಫೆಬ್ರವರಿ 5ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

|
Google Oneindia Kannada News

ಬೆಂಗಳೂರು, ಫೆಬ್ರವರಿ 02; ಬೆಂಗಳೂರು ನಗರದಲ್ಲಿ ಫೆಬ್ರವರಿ 5ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಸುಮಾರು 80ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಈ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಫೆಬ್ರವರಿ 5ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯ ತನಕ ಮೇಳ ನಡೆಯಲಿದೆ.

ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ; ಫೆ. 28ರ ತನಕ ಅರ್ಜಿ ಹಾಕಿ ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ; ಫೆ. 28ರ ತನಕ ಅರ್ಜಿ ಹಾಕಿ

ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಬಿಕಾಂ, ಬಿಬಿಎ, ಬಿಎ, ಬಿಸಿಎ, ಬಿಇ, ಸ್ನಾತಕೋತರ ಪದವಿ ಹೊಂದಿರುವ ಯುವಕ/ ಯುವತಿಯರು ಪಾಲ್ಗೊಳ್ಳಲಿದ್ದಾರೆ. ಮೇಳದಲ್ಲಿ ಸುಮಾರು 80ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.

PSI Recruitment Re Exam : ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ, ಪ್ರವೀಣ್‌ ಸೂದ್ ಟ್ವೀಟ್PSI Recruitment Re Exam : ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ, ಪ್ರವೀಣ್‌ ಸೂದ್ ಟ್ವೀಟ್

Job Fair In BGS PU College Bengaluru On February 5th

ಉದ್ಯೋಗ ಮೇಳದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 8105020115, 9108347465, 9964907444 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಇ-ಮೇಲ್ ವಿಳಾಸ [email protected]

ಶಿವಮೊಗ್ಗ; ಸಹ್ಯಾದ್ರಿ ಕಾಲೇಜಿನಲ್ಲಿ ಫೆ.4ರಂದು ಉದ್ಯೋಗ ಮೇಳಶಿವಮೊಗ್ಗ; ಸಹ್ಯಾದ್ರಿ ಕಾಲೇಜಿನಲ್ಲಿ ಫೆ.4ರಂದು ಉದ್ಯೋಗ ಮೇಳ

ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು http://skillconnect.kaushalkar.com/candidatereg ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಉದ್ಯೋಗ ಮೇಳ ನಡೆಯುವ ವಿಳಾಸ; ಬಿ. ಜಿ. ಎಸ್ ಕಾಲೇಜ್ ಕ್ಯಾಂಪಸ್, ಭೋವಿಪಾಳ್ಯ ಮಹಾಲಕ್ಷ್ಮಿ ಪುರಂ, ಬೆಂಗಳೂರು-560086.

ತರಬೇತಿಗಾಗಿ ಅರ್ಜಿ ಆಹ್ವಾನ; ಭಾರತೀಯ ಸೇನೆ/ ರಕ್ಷಣಾ ಇಲಾಖೆಗಳ ಸೇವೆಗಳ ಮಾರ್ಗದರ್ಶನ ತರಬೇತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ತರಬೇತಿ ನೀಡಲಾಗುತ್ತಿದೆ. ಈ ತರಬೇರಿಗೆ ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ ಹಾಗೂ ಇತರೆ ರಕ್ಷಣಾ ಇಲಾಖೆಗಳ ಸೇವೆಗಳಿಗೆ ಸೇರ ಬಯಸುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ.

ತರಬೇತಿ ಪಡೆಯಲು ಆಸಕ್ತ ಇರುವ 17 ರಿಂದ 20 ವರ್ಷದೊಳಗಿನ ಯುವರು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಮಾಡಲು ವಿಳಾಸ
https://bcwd.karnataka.gov.in.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1ಕ್ಕೆ ರೂ. 2.50 ಲಕ್ಷಗಳು ಹಾಗೂ ಪ್ರ-2ಎ, 3ಎ, 3ಬಿ ಗಳಿಗೆ ರೂ. 1.00 ಲಕ್ಷಗಳಾಗಿದೆ. ಅಭ್ಯರ್ಥಿಯು 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು.

ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುತ್ತದೆ. ಅಭ್ಯರ್ಥಿಗಳು ಯಾವುದಾದರೊಂದು ಜಿಲ್ಲೆಯನ್ನು ಮಾತ್ರ ಆಯ್ಕೆ ಮಾಡಬೇಕಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 805077000, ದಕ್ಷಿಣ ಕನ್ನಡ 0824-2225078, ಉಡುಪಿ 0820-2574881 ಹಾಗೂ ಉತ್ತರ ಕನ್ನಡದಲ್ಲಿ 08382-226589 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

English summary
Job fair organized in Bengaluru BGS pu college Mahalakshmipuram Bhovi Palya on February 5th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X