ಜನವರಿ 22ರಂದು ಬೀದರ್ನಲ್ಲಿ ಉದ್ಯೋಗ ಮೇಳ
ಬೀದರ್, ಜನವರಿ 18: ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜನವರಿ 22ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ನಿರುದ್ಯೋಗಿ ಯುವಕ/ ಯುವತಿಯರು ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜನವರಿ 22ರ ಶುಕ್ರವಾರ ಉದ್ಯೋಗ ಮೇಳ ಆಯೋಜನೆ ಮಾಡಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ.
ರಾಜ್ಯದ 10ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತರು ಸೂಕ್ತ ದಾಖಲಾತಿಗಳ ಜೊತೆ ಮೇಳದಲ್ಲಿ ಪಾಲ್ಗೊಳ್ಳಬಹುದು.

ಎಸ್. ಎಸ್. ಎಲ್. ಸಿ ಫೇಲ್/ ಪಾಸು, ಪಿಯುಸಿ, ಐಟಿಐ ಪದವೀಧರರು ಹಾಗೂ ಸ್ನಾತ್ತಕೋತ್ತರ ಪದವೀಧರ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.
ಉದ್ಯೋಗ ಮೇಳಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಬೀದರ್ ಭಾಗದ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08482-234682, 8217886740 ಸಂಖ್ಯೆಗೆ ಸಂಪರ್ಕಿಸಬಹುದು ಅಥವ ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಬಹುದು.
ಉದ್ಯೋಗ ಮೇಳ ನಡೆಯುವ ವಿಳಾಸ; ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ಕುಂಬಾರವಾಡಾ ಕ್ರಾಸ್, ಮನ್ನಳ್ಳಿ ರೋಡ್, ಬೀದರ್.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications