ಬೆಂಗಳೂರಿನಲ್ಲಿ ಸೆ.27ರಂದು ಉದ್ಯೋಗ ಮೇಳ
ಬೆಂಗಳೂರು, ಸೆಪ್ಟೆಂಬರ್ 25 : ಬೆಂಗಳೂರಿನ ಬೃಂದಾವನ್ ಕಾಲೇಜ್‌ನಲ್ಲಿ ಸೆ.27ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಉದ್ಯೋಗ ಮತ್ತು ತರಬೇತಿ ಇಲಾಖೆ ಮತ್ತು ಬ್ಯಾಟರಾಯನಪುರ ಕಾಂಗ್ರೆಸ್ ಜಂಟಿಯಾಗಿ ಈ ಮೇಳವನ್ನು ಆಯೋಜಿಸಿವೆ.
ಬಾಗಲೂರು ಕ್ರಾಸ್ ಬಳಿ ಇರುವ ಬೃಂದಾವನ್ ಕಾಲೇಜ್‌ನಲ್ಲಿ ಸೆ.27ರ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಗ್ರಿ, ಐಟಿಐ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವವರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಐಟಿಸಿ, ವೊಲ್ವೋ, ಆಕ್ಸಿಸ್ ಬ್ಯಾಂಕ್, ಟಿವಿಎಸ್ ಸೇರಿದಂತೆ 50ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಅಭ್ಯರ್ಥಿಗಳು ಸಾಕಷ್ಟು ಬಯೋಡೇಟಾ ಪ್ರತಿಗಳನ್ನು ತರಬೇಕು ಎಂದು ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ : 080-23626678 ಅಥವ http://krishnabyregowda.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. [ಉತ್ತರ ಕನ್ನಡ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]
ಅಂಗನವಾಡಿಯಲ್ಲಿ ಕೆಲಸ ಖಾಲಿ ಇದೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಉತ್ತರ ತಾಲ್ಲೂಕು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಹಾಗೂ ಸುಮಂಗಲಿ ಸೇವಾಶ್ರಮದಿಂದ ಹೆಚ್ಚುವರಿಯಾಗಿ ಸೇರಿರುವ ಅಂಗನವಾಡಿ ಕೇಂದ್ರಗಳಿಗೆ ಖಾಲಿ ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸ್ಥಾನಗಳು ತಾತ್ಕಾಲಿಕವಾಗಿದ್ದು, ಗೌರವಧನದ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಿದೆ. 18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. [822 ಪೊಲೀಸ್ ಪೇದೆಗಳ ಹುದ್ದೆಗೆ ಅರ್ಜಿ ಆಹ್ವಾನ]
ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿಗಳನ್ನು 13-10-2015ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಸಲ್ಲಿಸಬಹುದು.
ಅರ್ಜಿಗಳನ್ನು ಸಲ್ಲಿಸಲು ವಿಳಾಸ : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, # 2023, ಹೆಚ್.ಐ.ಜಿ., 3ನೇ ಹಂತ, ಯಲಹಂಕ ಉಪನಗರ, ಪೊಲೀಸ್ ಠಾಣೆಯ ಹತ್ತಿರ, ಯಲಹಂಕ ಉಪನಗರ, ಬೆಂಗಳೂರು 560064, ದೂರವಾಣಿ ಸಂಖ್ಯೆ 080-28462513.












Click it and Unblock the Notifications