ಚಿತ್ರದುರ್ಗ; ಜುಲೈ 27ರಂದು ಉದ್ಯೋಗ ಮೇಳ, ಪ್ರವೇಶ ಉಚಿತ
ಚಿತ್ರದುರ್ಗ, ಜುಲೈ 21; ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಚಿತ್ರದುರ್ಗದಲ್ಲಿ ಜುಲೈ 27ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಪ್ರವೇಶ ಉಚಿತವಾಗಿದ್ದು, 18 ರಿಂದ 30 ವರ್ಷದೊಳಗಿನ ವಯೋಮಿತಿಯವರು ಪಾಲ್ಗೊಳ್ಳಬಹುದು.
ಜುಲೈ 27ರ ಗುರುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ತನಕ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ ನಡೆಯಲಿದೆ. ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ವಿದ್ಯಾರ್ಹತೆಯ ವಿವರ: ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎಂ ಮತ್ತು ಇತರ ಪದವೀಧರರು ಪಾಲ್ಗೊಳ್ಳಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ಬಯೋಡಾಟ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋ ತರಬೇಕು. ಮೇಳದಲ್ಲಿ ಭಾಗವಹಿಸುವವರು ಖಾಸಗಿ ಸಂಸ್ಥೆಗಳು. ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 7022459064, 8105619020.
ಶನಿವಾರ ಕೊಪ್ಪದಲ್ಲಿ ಉದ್ಯೋಗ ಮೇಳ; ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಎಂ.ಕಾಂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕೊಪ್ಪ, ಚಿಕ್ಕಮಗಳೂರು ಜಿಲ್ಲೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಚಿಕ್ಕಮಗಳೂರು, ನಿರ್ಮಾಣ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ತಾಲ್ಲೂಕು ಮಟ್ಟದ ಬೃಹತ್ ಉದ್ಯೋಗ ಮೇಳ ಜುಲೈ 22ರ ಶನಿವಾರ ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪದಲ್ಲಿ ಉದ್ಯೋಗ ಮೇಳ ಆರಂಭವಾಗಲಿದೆ. ಯಾವುದೇ ವಿದ್ಯಾರ್ಹತೆ ಇರುವವರು ಸಹ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಆಸಕ್ತರು ರೆಸ್ಯೂಮ್, ಆಧಾರ್ ಕಾರ್ಡ್, ವಿದ್ಯಾರ್ಹತೆಯ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಸೈಜಿನ ಫೋಟೋಗಳ ಜೊತೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಕಲ್ಯಾಣ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ; ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಿಕರು 'ಸಿ' ವೃಂದದ ಹುದ್ದೆಗಳ ನೇಮಕಾತಿಗಾಗಿ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರಿಂದ ಅರ್ಜಿ ಕರೆಯಲಾಗಿದೆ.
ಭೂಸೇನೆಯ ಜೆ.ಸಿ.ಓ ರ‍್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ‍್ಯಾಂಕ್‌ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಹುದ್ದೆಗೆ ಅರ್ಹರಾಗಿದ್ದು, 20 ದಿನಗಳೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459.












Click it and Unblock the Notifications