ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆಯಲ್ಲಿ ಡಿಸೆಂಬರ್‌ 15ರಂದು ಉದ್ಯೋಗ ಮೇಳ

|
Google Oneindia Kannada News

ದಾವಣಗೆರೆ, ಡಿಸೆಂಬರ್ 06; ದಾವಣಗೆರೆಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಡಿಸೆಂಬರ್ 15ರಂದು ಆಯೋಜನೆ ಮಾಡಲಾಗಿದೆ. 30ಕ್ಕೂ ಅಧಿಕ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.

ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಸುರತ್ಕಲ್ ಟೋಲ್ ರದ್ದು; ಉದ್ಯೋಗ ಕಳೆದುಕೊಂಡ 50 ಜನಸುರತ್ಕಲ್ ಟೋಲ್ ರದ್ದು; ಉದ್ಯೋಗ ಕಳೆದುಕೊಂಡ 50 ಜನ

ಡಿಸೆಂಬರ್ 15ರಂದು ಬೆಳಗ್ಗೆ 9 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಮೇಳದಲ್ಲಿ 30ಕ್ಕೂ ಹೆಚ್ಚು ಕಂಪನಿಗಳು ಮತ್ತು ಒಂದು ಸಾವಿರಕ್ಕೂ ಅಧಿಕ ಉದ್ಯೋಗಾಂಕ್ಷಿಗಳು ಭಾಗವಹಿಸಲಿದ್ದಾರೆ.

ಅಪ್ರೆಂಟಿಸ್ ನೇಮಕಾತಿ, ಬಳ್ಳಾರಿಯಲ್ಲಿ ಡಿ. 12ಕ್ಕೆ ಕ್ಯಾಂಪಸ್ ಸಂದರ್ಶನ ಅಪ್ರೆಂಟಿಸ್ ನೇಮಕಾತಿ, ಬಳ್ಳಾರಿಯಲ್ಲಿ ಡಿ. 12ಕ್ಕೆ ಕ್ಯಾಂಪಸ್ ಸಂದರ್ಶನ

Job Fair In Davanagere On December 15

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 7892956667, 8095774802, 8971749636 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಕೇಂದ್ರಿಯ ವಿದ್ಯಾಲಯ 13,404 ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಹಾಕಿ ಕೇಂದ್ರಿಯ ವಿದ್ಯಾಲಯ 13,404 ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಹಾಕಿ

ಫೆಸಿಲಿಟೆಟರ್ ಹುದ್ದೆಗೆ ಅರ್ಜಿ ಹಾಕಿ; ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ದೇಶೀ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್ ಯೋಜನೆಯಡಿಯಲ್ಲಿ ಕೃಷಿ ಪದವೀಧರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಫೆಸಿಲಿಟೆಟರ್ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಎರಡು ಪ್ರತಿಗಳೊಂದಿಗೆ ಡಿಸೆಂಬರ್ 12ರಂದು ಬೆಳಗ್ಗೆ 11ಗಂಟೆಗೆ ಧಾರವಾಡ ಕೃಷಿವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಪ್ರತಿಗಳನ್ನು ಸಂದರ್ಶನ ಸಮಯದಲ್ಲಿ ತರಬೇಕೆಂದು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವ ಪರಿವರ್ತಕ ಹುದ್ದೆಗೆ ಅರ್ಜಿ ಹಾಕಿ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿಯಲ್ಲಿ ಯುವಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವವರು 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರಬೇಕು. ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರಬೇಕು. ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು ಇವರನ್ನು ಭೇಟಿ ಮಾಡಬಹುದಾಗಿದೆ.

English summary
Job fair organized in Davanagere on December 15. Around 30 company will take part in job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X