ದಾವಣಗೆರೆ; ಡಿ.28 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ
ದಾವಣಗೆರೆ, ಡಿಸೆಂಬರ್ 26; ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದಾವಣಗೆರೆಯಲ್ಲಿ ಡಿಸೆಂಬರ್ 28ರಂದು ಜಿಲ್ಲಾ ಮಟ್ಟದ ಉದ್ಯೋಗಮೇಳವನ್ನು ಏರ್ಪಡಿಸಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು ಉದ್ಯೋಗ ಮೇಳದ ಉಪಯೋಗ ಪಡೆದುಕೊಳ್ಳಬಹುದಾಗಿದೆ.
ಡಿಸೆಂಬರ್ 28ರಂದು ಬೆಳಗ್ಗೆ 10 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯ, ಯು.ಬಿ.ಡಿ.ಟಿ ಇಂಜನಿಯರಿಂಗ್ ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ ದಾವಣಗೆರೆ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಗ್ರಾಮೀಣಾಭಿವೃದ್ದಿ ಸಚಿವಾಲಯ, ಭಾರತ ಸರ್ಕಾರ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ಸರ್ಕಾರ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಮತ್ತು ಜಿಲ್ಲಾ ಪಂಚಾಯಿತಿ ದಾವಣಗೆರೆ ಇವರ ಸಹಯೋಗದೊಂದಿಗೆ ಮೇಳ ಆಯೋಜನೆ ಮಾಡಲಾಗಿದೆ.

ನಗರಾಭಿವೃದ್ದಿ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಎ. ಬಸವರಾಜ (ಭೈರತಿ) ಉದ್ಯೋಗ ಮೇಳ ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎ. ರವೀಂದ್ರನಾಥ ಅಧ್ಯಕ್ಷತೆ ವಹಿಸುವರು.
ಸಂಸದ ಜಿ. ಎಂ. ಸಿದ್ದೇಶ್ವರ, ಹೊನ್ನಾಳಿ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ, ಚನ್ನಗಿರಿ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ. ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ವಿ. ರಾಮಚಂದ್ರ, ಮಾಯಕೊಂಡ ಶಾಸಕ ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಪ್ರೊ. ಎನ್. ಲಿಂಗಣ್ಣ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ವಿಧಾನಪರಿಷತ್ ಸದಸ್ಯರಗಳಾದ ಜಿ. ರಘು ಆಚಾರ್, ಆರ್. ಪ್ರಸನ್ನ ಕುಮಾರ್, ಲಹರ್‍ಸಿಂಗ್ ಸಿರೋಯಾ, ಮೋಹನ್ ಕುಮಾರ್ ಕೊಂಡಜ್ಜಿ, ಎಸ್. ರಾಮಪ್ಪ, ಕೆ. ಪಿ. ನಂಜುಂಡಿ ವಿಶ್ವಕರ್ಮ, ರವಿಕುಮಾರ್. ಎನ್, ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್. ಎಲ್. ಭೋಜೇಗೌಡ, ವೈ. ಎ. ನಾರಾಯಣಸ್ವಾಮಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಉದ್ಯೋಗ ಮೇಳಕ್ಕೆ ಆಗಮಿಸಿದ ಅಭ್ಯರ್ಥಿಗಳ ನೋಂದಣಿ ಕಾರ್ಯಕ್ರಮವಿರುತ್ತದೆ. ನಂತರ 11 ಗಂಟೆಯಿಂದ ಕಾರ್ಯಕ್ರಮ ಪ್ರಾರಂಭವಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 20 ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. ಇದರಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎಂ ಹಾಗೂ ಸ್ನಾತಕೋತ್ತರ ಪದವಿ ಪಡೆದ ಗ್ರಾಮೀಣ ಹಾಗೂ ನಗರ ಪ್ರದೇಶದ ನಿರುದ್ಯೋಗ ಯುವಕ/ ಯುವತಿಯರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಉದ್ಯೋಗ ಮೇಳಕ್ಕೆ ಆಗಮಿಸುವವರು ತಮ್ಮ ಸ್ವವಿವರ, ವಿದ್ಯಾರ್ಹತೆ ದಾಖಲಾತಿಗಳು, ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಪಡಿತರ ಚೀಟಿಯೊಂದಿಗೆ ಭಾಗವಹಿಸಬೇಕು.
ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಬಳಸಿ ಆನ್‍ಲೈನ್ ಮೂಲಕ ನೋಂದಣಿ ಮಾಡಬಹುದು.
ಅರ್ಜಿ ಆಹ್ವಾನ; ದಾವಣಗೆರೆ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶ್ಯಲ್ಯಗಳ ತರಬೇತಿ (ಕರಾಟೆ/ ಜುಡೋ/ ಟೈಕ್ವಾಂಡೋ) ತರಬೇತಿ ನೀಡಲು ಅರ್ಹ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನುರಿತ ಬ್ಲಾಕ್‍ಬೆಲ್ಟ್ (ಬ್ಲಾಕ್‍ಬೆಲ್ಟ್) ಮಹಿಳಾ ತರಬೇತಿ ಶಿಕ್ಷಕರನ್ನು ಹೊಂದಿರುವ ಸಂಸ್ಥೆಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ವಾರದಲ್ಲಿ ಎರಡು ದಿನಗಳಂತೆ ಮತ್ತು ದಿನಕ್ಕೆ 60 ನಿಮಿಷಗಳ ಸಮಯದಂತೆ ಒಟ್ಟು 6 ತಿಂಗಳಿಗೆ 48 ಬೋಧನಾ ಅವಧಿಗಳಲ್ಲಿ ತರಬೇತಿ ನೀಡಬೇಕು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿ ದಾವಣಗೆರೆ ನೇತೃತ್ವದ ಸಮಿತಿಯ ಮೂಲಕ ಜಿಲ್ಲಾ ಮಟ್ಟದಲ್ಲಿ ಗುರುತಿಸಲ್ಪಟ್ಟ ತರಬೇತಿದಾರರನ್ನು ಆಯ್ಕೆ ಮಾಡಲಾಗುವುದು. ಆಯಾ ತಾಲ್ಲೂಕಿನ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣ ಇಲಾಖೆ ಇವರು ಅನುಷ್ಠಾನಾಧಿಕಾರಿ ಆಗಿರುತ್ತಾರೆ.
ಪ್ರತಿ ಒಬ್ಬ ತರಬೇತುದಾರರಿಗೆ ಪ್ರತಿ ಬೋಧನಾ ಅವಧಿಗೆ ಸಂಭಾವನೆ ರೂ.500 ಹಾಗೂ ತರಬೇತಿದಾರರ ಪ್ರಯಾಣ ವೆಚ್ಚ ಹಾಗೂ ಇತರೆ ವೆಚ್ಚಕ್ಕಾಗಿ ರೂ.100 ರಂತೆ ಪಾವತಿಸಲಾಗುವುದು. ತರಬೇತಿ ಕಾರ್ಯಕ್ರಮದ ಕುರಿತು ದೂರುಗಳು ಬಾರದಂತೆ ಎಚ್ಚರವಹಿಸಿ, ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ತರಬೇತಿ ನೀಡಬೇಕು.
ಅರ್ಜಿಯನ್ನು ಡಿಸೆಂಬರ್ 31ರವರೆಗೆ ಆಫ್‍ಲೈನ್‍ನಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕಛೇರಿ ಸಮಯದಲ್ಲಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿ, ಜಿಲ್ಲಾಡಳಿತ ಭವನ, ರೂಂ 46 ದಾವಣಗೆರೆ ಇಲ್ಲಿ ಖುದ್ದಾಗಿ ಸಲ್ಲಿಸಬಹುದಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಛೇರಿಯ ದೂರವಾಣಿ ಸಂಖ್ಯೆ 08192-262973ಗೆ ಸಂರ್ಪಕಿಸಬಹುದು.












Click it and Unblock the Notifications