• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದಾವಣಗೆರೆಯಲ್ಲಿ ಫೆಬ್ರವರಿ 18ರಂದು ಉದ್ಯೋಗ ಮೇಳ

|

ದಾವಣಗೆರೆ ಫೆ.15: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ಇವರ ವತಿಯಿಂದ ಫೆ.18 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಟಿ.ಬಿ.ಸರ್ಕಲ್ ಹತ್ತಿರ, ಹೊನ್ನಾಳಿ ಇಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕ ನಂತರ ತಿಳಿಸಲಾಗುವುದು.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಫೆಬ್ರವರಿ 18ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಹಲವಾರು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿವೆ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ಇವರ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 10 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಟಿ. ಬಿ. ಸರ್ಕಲ್ ಹತ್ತಿರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಯಾದಗಿರಿಯಲ್ಲಿ ಫೆ. 16ರಂದು ಉದ್ಯೋಗ ಮೇಳ

ಉದ್ಯೋಗ ಮೇಳದಲ್ಲಿ ಹಲವಾರು ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ಅಥವಾ ಬಿಬಿಎಂ, ಬಿಸಿಎ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಹಿರಿಯೂರಿನಲ್ಲಿ ಫೆ.18 ರಂದು ಉದ್ಯೋಗ ಮೇಳ: ನೀವೂ ಭಾಗವಹಿಸಿ

ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 18ರಂದು ಕನಿಷ್ಠ 10 ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ನೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಫೆ. 20ರೊಳಗೆ ಅರ್ಜಿ ಹಾಕಿ

ಉದ್ಯೋಗ ಮೇಳಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆಗಳು 08192-259446, 6361550016, 9743636369 7406323294 ಸಂಪರ್ಕಿಸಬಹುದಾಗಿದೆ.

English summary
Davanagere district employment exchange office organized job fair on February 18, 2021 at Honalli first grade college near T. B. Circle.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X