ದಾವಣಗೆರೆ; ನವೆಂಬರ್ 21ರಂದು ಉದ್ಯೋಗ ಮೇಳ
ದಾವಣಗೆರೆ, ನವೆಂಬರ್ 20 : ದಾವಣಗೆರೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ನವೆಂಬರ್ 21ರಂದು ಉದ್ಯೋಗ ಮೇಳವನ್ನು ಆಯೋಜಿಸಿದೆ. ನಿರುದ್ಯೋಗಿ ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇಲ್ಲಿ ನವೆಂಬರ್ 21ರ ಗುರುವಾರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಬಿಎ, ಬಿಎಸ್‍ಸಿ, ಬಿಸಿಎ, ಬಿಬಿಎಂ, ಬಿಬಿಎ, ಬಿಕಾಂ, ಬಿಎಸ್‌ಸಿ (ನರ್ಸಿಂಗ್), ಎಂಬಿಎ ಹಾಗೂ ಎಂಕಾಂ ಪದವಿ ಹೊಂದಿದ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳ ಬಹುದಾಗಿದೆ.

ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಕನಿಷ್ಠ 10 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಆಗಮಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
ಉದ್ಯೋಗ ಮೇಳ ನಡೆಯುವ ಸ್ಥಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ 51, ಜಿಲ್ಲಾಡಳಿತ ಭವನ, ಪಿ.ಬಿ.ರೋಡ್, ದಾವಣಗೆರೆ.
ಹೆಚ್ಚಿನ ಮಾಹಿತಿಗಾಗಿ 08192-259446, 6361550016, 7406323294 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.











Click it and Unblock the Notifications