ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆ; ನವೆಂಬರ್ 21ರಂದು ಉದ್ಯೋಗ ಮೇಳ

|
Google Oneindia Kannada News

ದಾವಣಗೆರೆ, ನವೆಂಬರ್ 20 : ದಾವಣಗೆರೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ನವೆಂಬರ್ 21ರಂದು ಉದ್ಯೋಗ ಮೇಳವನ್ನು ಆಯೋಜಿಸಿದೆ. ನಿರುದ್ಯೋಗಿ ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇಲ್ಲಿ ನವೆಂಬರ್ 21ರ ಗುರುವಾರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

BARCಯಲ್ಲಿ ನೇಮಕಾತಿ: 92 ಭದ್ರತಾ ಸಿಬ್ಬಂದಿ ಹುದ್ದೆಗಳಿವೆBARCಯಲ್ಲಿ ನೇಮಕಾತಿ: 92 ಭದ್ರತಾ ಸಿಬ್ಬಂದಿ ಹುದ್ದೆಗಳಿವೆ

ಉದ್ಯೋಗ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಬಿಎ, ಬಿಎಸ್‍ಸಿ, ಬಿಸಿಎ, ಬಿಬಿಎಂ, ಬಿಬಿಎ, ಬಿಕಾಂ, ಬಿಎಸ್‌ಸಿ (ನರ್ಸಿಂಗ್), ಎಂಬಿಎ ಹಾಗೂ ಎಂಕಾಂ ಪದವಿ ಹೊಂದಿದ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳ ಬಹುದಾಗಿದೆ.

ಐಟಿ ಕಂಪನಿಗಳಿಂದ 40 ಸಾವಿರ ಉದ್ಯೋಗ ಕಡಿತ ನಿರೀಕ್ಷೆಐಟಿ ಕಂಪನಿಗಳಿಂದ 40 ಸಾವಿರ ಉದ್ಯೋಗ ಕಡಿತ ನಿರೀಕ್ಷೆ

Job Fair In Davanagere On November 21

ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಕನಿಷ್ಠ 10 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಆಗಮಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.

ತುಮಕೂರು ನ್ಯಾಯಾಲಯದಲ್ಲಿ 13 ಹುದ್ದೆಗಳಿಗೆ ಅರ್ಜಿ ಆಹ್ವಾನತುಮಕೂರು ನ್ಯಾಯಾಲಯದಲ್ಲಿ 13 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಮೇಳ ನಡೆಯುವ ಸ್ಥಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ 51, ಜಿಲ್ಲಾಡಳಿತ ಭವನ, ಪಿ.ಬಿ.ರೋಡ್, ದಾವಣಗೆರೆ.

ಹೆಚ್ಚಿನ ಮಾಹಿತಿಗಾಗಿ 08192-259446, 6361550016, 7406323294 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Davanagere district employment exchange office organized job fair on November 21, 2019 at district employment exchange office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X