ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡದಲ್ಲಿ ಡಿಸೆಂಬರ್ 18ರಂದು ಉದ್ಯೋಗ ಮೇಳ

|
Google Oneindia Kannada News

ಧಾರವಾಡ, ಡಿಸೆಂಬರ್ 09; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಧಾರವಾಡದ ಜೆಎಸ್‍ಎಸ್ ಆವರಣದಲ್ಲಿ ಡಿಸೆಂಬರ್ 18 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಿದೆ. ಆಸಕ್ತರು ಹೆಸರು ನೋಂದಣಿ ಮಾಡಿಕೊಳ್ಳುವಂತೆ ಕರೆ ನೀಡಲಾಗಿದೆ.

ಧಾರವಾಡ ನಗರದ ವಿದ್ಯಾಗಿರಿ ಜೆಎಸ್‌ಎಸ್ ಆವರಣದಲ್ಲಿ ಉದ್ಯೋಗ ಮೇಳ ಡಿಸೆಂಬರ್ 18ರಂದು ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದೆ. ಆಯೋಜಿಸಲಾಗಿದೆ. ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಅಪ್ರೆಂಟಿಸ್ ನೇಮಕಾತಿ, ಬಳ್ಳಾರಿಯಲ್ಲಿ ಡಿ. 12ಕ್ಕೆ ಕ್ಯಾಂಪಸ್ ಸಂದರ್ಶನ ಅಪ್ರೆಂಟಿಸ್ ನೇಮಕಾತಿ, ಬಳ್ಳಾರಿಯಲ್ಲಿ ಡಿ. 12ಕ್ಕೆ ಕ್ಯಾಂಪಸ್ ಸಂದರ್ಶನ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್, ಕಾಲೇಜು ಶಿಕ್ಷಣ ಇಲಾಖೆ, ಉದ್ಯೋಗ ಮತ್ತು ತರಬೇತಿ ಇಲಾಖೆ, ಜನತಾ ಶಿಕ್ಷಣ ಸಮಿತಿ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಮಂಡ್ಯದಲ್ಲಿ ಡಿಸೆಂಬರ್‌ 14ರಂದು ಬೃಹತ್ ಉದ್ಯೋಗ ಮೇಳ ಮಂಡ್ಯದಲ್ಲಿ ಡಿಸೆಂಬರ್‌ 14ರಂದು ಬೃಹತ್ ಉದ್ಯೋಗ ಮೇಳ

Job Fair In Dharwad On December 18Th

ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ ಅನುತ್ತೀರ್ಣ ಮತ್ತು ಅದಕ್ಕಿಂತಲೂ ಕಡಿಮೆ ಶಿಕ್ಷಣ ಪಡೆದವರು ಹಾಗೂ ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ, ಬಿಎ, ಬಿಕಾಂ ಇನ್ನಿತರ ಪದವಿ ಮತ್ತು ಸ್ನಾತಕೋತರ ಪದವಿ ಪಾಸಾದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ದಾವಣಗೆರೆಯಲ್ಲಿ ಡಿಸೆಂಬರ್‌ 15ರಂದು ಉದ್ಯೋಗ ಮೇಳ ದಾವಣಗೆರೆಯಲ್ಲಿ ಡಿಸೆಂಬರ್‌ 15ರಂದು ಉದ್ಯೋಗ ಮೇಳ

ಉದ್ಯೋಗ ಮೇಳದಲ್ಲಿ ಒಟ್ಟು 70ಕಿಂತ ಅಧಿಕ ಕಂಪನಿಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಹೆಸರು ನೋಂಣಿಗೆ ಲಿಂಕ್ http://skillconnect.kaushalkar.com/candidatereg

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಂಪನಿಗಳ ನೋಂದಣಿಗೆ ಲಿಂಕ್ https://skillconnect.kaushalkar.com/employereg

ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ; ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ 18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ ಯುವತಿಯರಿಗಾಗಿ ವಿವಿಧ ತರಬೇತಿಗಳನ್ನು ನೀಡುತ್ತಿದೆ. ಆಸಕ್ತರು ಡಿಸೆಂಬರ್ 24ರೊಳಗೆ ಅರ್ಜಿ ಸಲ್ಲಿಸಬೇಕು.

ಮಹಿಳೆಯರಿಗಾಗಿ 30 ದಿನಗಳ ಟೇಲರಿಂಗ್ ತರಬೇತಿ ಮತ್ತು 10 ದಿನಗಳ ಲಾಭದಾಯಕ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು ಉಚಿತ ತರಬೇತಿಯನ್ನು ನೀಡಲಾಗುತ್ತಿದೆ. ತರಬೇತಿಗಳು 2023ರ ಜನವರಿಯಲ್ಲಿ ಆರಂಭವಾಗುತ್ತಿದ್ದು, ಊಟ ಹಾಗೂ ವಸತಿಯು ಉಚಿತ.

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಡಿಸೆಂಬರ್ 24ಕೊನೆಯ ದಿನವಾಗಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ.

ದೂರವಾಣಿ ಸಂಖ್ಯೆಗಳು 9482188780, 9483485489, 7204609646, 9632225123, 08284-220807.

English summary
Job fair organized in JSS Vidyagiri Dharwad on December 18. Candidates can register their name to attend job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X