ಹಾಸನದಲ್ಲಿ ಜನವರಿ 23ರಂದು ಉದ್ಯೋಗ ಮೇಳ
ಹಾಸನ, ಜನವರಿ 17 : ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜನವರಿ 23ರಂದು ಉದ್ಯೋಗ ಮೇಳವನ್ನು ಆಯೋಜಿಸಿದೆ. ಹಲವು ಕಂಪನಿಗಳು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಹಾಸನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜ.23ರ ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ನಡೆಯಲಿದೆ. 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಹಾಸನ, ಮೈಸೂರು ಮತ್ತು ಬೆಂಗಳೂರಿನ ಹಲವು ಹೆಸರಾಂತ ಕಂಪನಿಗಳು ಪಾಲ್ಗೊಳ್ಳಲಿವೆ. ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.

ಎಸ್‌ಎಸ್‌ಎಲ್‌ಸಿ ಪಾಸು/ಫೇಲು, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಎಂಬಿಎ, ಇಂಜಿನಿಯರಿಂಗ್, ನರ್ಸಿಂಗ್, ಡ್ರೈವರ್‌ನಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಗ ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್, ಆಧಾರ್ ಕಾರ್ಡ್, ಸ್ವವಿವರದ ಬಯೋಡೆಟ ಪ್ರತಿಗಳನ್ನು ತರಬೇಕು ಎಂದು ಸೂಚನೆ ನೀಡಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಜೆ.ಬಿ.ವಿಜಯಲಕ್ಷ್ಮೀ ಅವರನ್ನು ಸಂಪರ್ಕಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.












Click it and Unblock the Notifications