ದಾವಣಗೆರೆ; ಜೂನ್ 16ರಂದು ಉದ್ಯೋಗ ಮೇಳ
ದಾವಣಗೆರೆ, ಜೂನ್ 14; ಕೆಲಸ ಹುಡುಕುತ್ತಿರುವ ಯುವಕ/ ಯುವತಿಯರಿಗೆ ಸಿಹಿಸುದ್ದಿ. ದಾವಣಗೆರೆಯಲ್ಲಿ ಜೂನ್ 16ರ ಶುಕ್ರವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ.
ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಧ.ರಾ.ಮ ವಿಜ್ಞಾನ ಕಾಲೇಜು ವತಿಯಿಂದ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ರವೀಂದ್ರ. ಡಿ. ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಉದ್ಯೋಗ ಮೇಳದಲ್ಲಿ ಹಲವು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿ.ಎ, ಬಿ.ಕಾಂ,ಬಿ.ಎಸ್ಸಿ, ಬಿ.ಬಿ.ಎ, ಬಿ.ಬಿ.ಎಂ, ಬಿ.ಸಿ.ಎ, ಎಂ.ಎ, ಎಂಎಸ್ಸಿ ಎಂಕಾಂ, ಎಂಬಿಎ, ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತರ ಅಭ್ಯರ್ಥಿಗಳು ನಿಗದಿತ ಸ್ಥಳಕ್ಕೆ ಸಂದರ್ಶನ ಸಮಯಕ್ಕೆ ಕನಿಷ್ಠ 8 ಸೆಟ್ ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಆಗಮಿಸಬೇಕು ಎಂದು ಸೂಚನೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗೆ 08192259446, 7760818607, 9945579519 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಉದ್ಯೋಗ ಮೇಳ ನಗರದ ಧ.ರಾ.ಮ ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ.
ಜೂನ್ 19ಕ್ಕೆ ನೇರ ಸಂದರ್ಶನ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಮೊಬೈಲ್ ಫೋನ್ ದುರಸ್ತಿ ಮತ್ತು ಸೇವೆಯ 30 ದಿನಗಳ ಉಚಿತ ತರಬೇತಿಯು ಜೂನ್ 19 ರಿಂದ ಆರಂಭವಾಗಲಿದ್ದು, ಅಂದು ಬೆಳಿಗ್ಗೆ 9.30 ರಿಂದ ನೇರ ಸಂದರ್ಶನ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಇವರನ್ನು ಸಂಪರ್ಕಿಸಬಹುದು.
ಕರೆ ಮಾಡಲು ದೂರವಾಣಿ ಸಂಖ್ಯೆಗಳು 9113880324, 9740982585, 8884554510, 9241482541.












Click it and Unblock the Notifications