ಕೊಪ್ಪಳ; ಗಂಗಾವತಿಯಲ್ಲಿ ಫೆಬ್ರವರಿ 8ಕ್ಕೆ ಉದ್ಯೋಗ ಮೇಳ
ಕೊಪ್ಪಳ, ಫೆಬ್ರವರಿ 04: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಫೆಬ್ರವರಿ 8ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ (ಎನ್.ಸಿ.ಎಸ್.) ಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗ ಮೇಳವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆನೆಗುಂದಿ ರಸ್ತೆ, ಸಾಯಿ ದೇವಸ್ಥಾನದ ಹತ್ತಿರ, ಗಂಗಾವತಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಮೇಳದಲ್ಲಿ 20ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ.

ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಲ್ಲಾ ಪದವೀಧರರು ಹಾಗೂ ಕಂಪ್ಯೂಟರ್ ತರಬೇತಿ ಪಡೆದ 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳ ನಕಲು ಪ್ರತಿಗಳು, ಬಯೋಡೆಟಾ, ಆಧಾರ್ ಕಾರ್ಡ್ ಹಾಗೂ ಭಾವಚಿತ್ರಗಳೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ರೀತಿಯ ಪ್ರವೇಶ ಶುಲ್ಕವಿರುವುದಿಲ್ಲ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇಲ್ಲಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08539-220859, 8105848991.












Click it and Unblock the Notifications