• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊಪ್ಪಳ; ಗಂಗಾವತಿಯಲ್ಲಿ ಫೆಬ್ರವರಿ 8ಕ್ಕೆ ಉದ್ಯೋಗ ಮೇಳ

|
Google Oneindia Kannada News

ಕೊಪ್ಪಳ, ಫೆಬ್ರವರಿ 04: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಫೆಬ್ರವರಿ 8ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ (ಎನ್.ಸಿ.ಎಸ್.) ಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

RBI ನೇಮಕಾತಿ 2021: 241 ಹುದ್ದೆಗಳಿಗೆ ಅರ್ಜಿ ಆಹ್ವಾನ RBI ನೇಮಕಾತಿ 2021: 241 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಮೇಳವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆನೆಗುಂದಿ ರಸ್ತೆ, ಸಾಯಿ ದೇವಸ್ಥಾನದ ಹತ್ತಿರ, ಗಂಗಾವತಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಮೇಳದಲ್ಲಿ 20ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ.

ಕರ್ನಾಟಕ ಪೊಲೀಸ್ ನೇಮಕಾತಿ 2021: 545 ಹುದ್ದೆಗಳಿಗೆ ಅರ್ಜಿ ಆಹ್ವಾನ ಕರ್ನಾಟಕ ಪೊಲೀಸ್ ನೇಮಕಾತಿ 2021: 545 ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಲ್ಲಾ ಪದವೀಧರರು ಹಾಗೂ ಕಂಪ್ಯೂಟರ್ ತರಬೇತಿ ಪಡೆದ 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಫೆ. 8 ರೊಳಗೆ ಅರ್ಜಿ ಹಾಕಿ ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಫೆ. 8 ರೊಳಗೆ ಅರ್ಜಿ ಹಾಕಿ

ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳ ನಕಲು ಪ್ರತಿಗಳು, ಬಯೋಡೆಟಾ, ಆಧಾರ್ ಕಾರ್ಡ್ ಹಾಗೂ ಭಾವಚಿತ್ರಗಳೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ರೀತಿಯ ಪ್ರವೇಶ ಶುಲ್ಕವಿರುವುದಿಲ್ಲ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇಲ್ಲಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08539-220859, 8105848991.

English summary
Job fair on February 8, 2021 at govt first grade college Gangavathi, Koppal. Candidates can attend job fair from morning 10 to evening 4 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X