ಮೈಸೂರಿನಲ್ಲಿ ಜುಲೈ 28ರಂದು ಬೃಹತ್ ಉದ್ಯೋಗ ಮೇಳ

ಮೈಸೂರು, ಜುಲೈ 19; ಕೆ. ಹರೀಶ್ ಗೌಡ ಸ್ನೇಹ ಬಳಗ ಹಾಗೂ ಉದ್ಯೋಗದಾತ ಸಂಸ್ಥೆ ಸಹಯೋಗದೊಂದಿಗೆ ಜುಲೈ 28ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಮೈಸೂರು ನಗರದ ಚಾಮರಾಜ ಕ್ಷೇತ್ರದ ಜನಪ್ರಿಯ ಕಾಂಗ್ರೆಸ್ ಮುಖಂಡರಾದ ಕೆ. ಹರೀಶ್ ಗೌಡರ 50ನೇ ಹುಟ್ಟುಹಬ್ಬದ ಪ್ರಯುಕ್ತ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, 120ಕ್ಕೂ ಹೆಚ್ಚು ಪ್ರತಿಷ್ಠಿತ ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳಲಿವೆ.

ಈ ಬೃಹತ್ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಜೆಒಸಿ, ಐಟಿಐ ಡಿಪ್ಲೊಮಾ, ಬಿಬಿಎಂ, ಬಿಸಿಎ, ಬಿಇ, ಎಂಬಿಎ, ಎಂಕಾಂ, ಎಂಎಸ್‌ಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಅಭ್ಯರ್ಥಿಗಳು ಭಾಗವಹಿಸಬಹುದು.

Job Fair In Gokulam Mysuru On July 28th

ಸುಮಾರು 5000ಕ್ಕೂ ಅಧಿಕ ಉದ್ಯೋಗವಕಾಶಗಳಿವೆ. ಉದ್ಯೋಗ ಮೇಳಕ್ಕೆ ಆಗಮಿಸುವ ಉದ್ಯೋಗಾಂಕ್ಷಿಗಳು ರೆಸ್ಯೂಮ್, ಅಂಕಪಟ್ಟಿಯ ಮೂಲ ಪ್ರತಿಗಳು, ಝೆರಾಕ್ಸ್ ಪ್ರತಿಗಳನ್ನು ತರಬೇಕು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು 18 ರಿಂದ 35 ವರ್ಷಗಳು.

ಉದ್ಯೋಗ ಮೇಳ ಮೈಸೂರು ಒನ್ ಮೈದಾನ, ಡಾಕ್ಟರ್ಸ್ ಕಾರ್ನರ್, ಗೋಕುಲಂ, ಮೈಸೂರು ಈ ವಿಳಾಸದಲ್ಲಿ 28 ಜುಲೈ ಗುರುವಾರ ಬೆಳಗ್ಗೆ 9 ಗಂಟೆಯಿಂದ ನಡೆಯಲಿದೆ.

ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ 8095679666, 9902310952,7676967671 ಸಂಖ್ಯೆಗೆ ಸಂಪರ್ಕಿಸಬಹುದು.

ಸ್ವಯಂ ಉದ್ಯೋಗ ಕಾರ್ಯಕ್ರಮ; ಕಲಬುರಗಿಯ ಆಳಂದ ಪುರಸಭೆಯಿಂದ 2022-23ನೇ ಸಾಲಿಗೆ ದಿನ್ ದಯಾಳ್ ಅಂತ್ಯೋದಯ ಯೋಜನೆ ನಲ್ಮ್ ಅಭಿಯಾನದಡಿ ಸ್ವಯಂ ಉದ್ಯೋಗ ಕಾರ್ಯಕ್ರಮ ಹಾಗೂ ಬ್ಯಾಂಕ್ ಕ್ರೆಡಿಟ್ ಸಾಲ ಸೌಲಭ್ಯ ಪಡೆಯಲು ಆಳಂದ ಪುರಸಭೆ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಂದ ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಸುವವರು ಆಳಂದ ಪಟ್ಟಣದ ನಿವಾಸಿಯಾಗಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಆಳಂದ ಪುರಸಭೆಯಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.

ಅರ್ಜಿಯೊಂದಿಗೆ ಬಿಪಿಎಲ್ ಪಡಿತರ ಚೀಟಿ, ಆಧಾರ್ ಕಾರ್ಡ್, ಐಡಿ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಯೋಜನಾ ವರದಿಯನ್ನು ಲಗತ್ತಿಸಿ ಜುಲೈ 29ರೊಳಗಾಗಿ ಕಚೇರಿ ಸಮಯದಲ್ಲಿ ಆಳಂದ ಪುರಸಭೆ ಕಚೇರಿಯಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಭತ್ಯೆ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸಿದ್ದು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಪ್ರವರ್ಗವಾರು ನಿಗದಿಪಡಿಸಿದ ಗುರಿಗನುಗುಣವಾಗಿ ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 2 ಕಡೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಸವಚೇತನ ಬಿಲ್ಡಿಂಗ್, 100 ಅಡಿ ರಸ್ತೆ, ರವೀಂದ್ರನಗರ, ಶಿವಮೊಗ್ಗ ಜಿಲ್ಲೆ ಇಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇದೇ ಕಚೇರಿಗೆ ಸಲ್ಲಿಸಬೇಕು.

ತರಬೇತಿ ಅವಧಿ; ತರಬೇತಿ ಅವಧಿಯು 4 ವರ್ಷಗಳದ್ದಾಗಿದ್ದು, ಮಾಸಿಕ ರೂ. 4000ಗಳ ತರಬೇತಿ ಭತ್ಯೆ ನೀಡಲಾಗುತ್ತದೆ. ಪ್ರವರ್ಗ 2ಎ, 3ಎ ಮತ್ತು 3ಬಿ ಗಳಿಗೆ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.2.50 ಲಕ್ಷ ಹಾಗೂ ಅಭ್ಯರ್ಥಿಯ ಗರಿಷ್ಟ ವಯೋಮಿತಿಯು ಪ್ರಕಟಣೆ ದಿನಾಂಕಕ್ಕೆ 30 ವರ್ಷಗಳನ್ನು ಮೀರಬಾರದು. ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಆದಾಯದ ಮಿತಿಯನ್ನು ನಿಗದಿಪಡಿಸಲಾಗಿದೆ.

ಅಭ್ಯರ್ಥಿಯ ಗರಿಷ್ಟ ವಯೋಮಿತಿಯು 31 ವರ್ಷಗಳು ಮೀರಿರಬಾರದು. ತರಬೇತಿಗೆ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷ ಅವಧಿಯ ಒಳಗಿರುವವರು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಬಾರ್ ಕೌನ್ಸಿಲ್‍ನಲ್ಲಿ ನೋಂದಣಿ ಮಾಡಿಸಿರಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+