ಹಾಸನ; ಮೇ 20ರ ಶನಿವಾರ ಉದ್ಯೋಗ ಮೇಳ

ಹಾಸನ, ಮೇ 18; ಹಾಸನ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಯುವಕ/ ಯುವತಿಯರಿಗೆ ಸಿಹಿಸುದ್ದಿ. ಮೇ 20ರ ಶನಿವಾರ ಹಾಸನದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 18 ರಿಂದ 30 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೇ 20ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದು ಎಂದು ಮನವಿ ಮಾಡಲಾಗಿದೆ.

Job Fair In Hassan District Employment Exchange Office On May 20

ಜಿಲ್ಲಾ ವ್ಯಾಪ್ತಿಯ ಕಂಪನಿಗಳಾದ ಎ. ಎಚ್. ಪಿ ಅಪೇರಲ್ಸ್, ಲೀತಿಯಮ್ ಅರ್ಬನ್ ಟೆಕ್ನಾಲಜಿ, ಸಿ. ಎಸ್. ಬಿ ಬ್ಯಾಂಕ್, ಯುಕ್ತ ಕೌಶಲ ತರಬೇತಿ ಕೇಂದ್ರ, ಕ್ಯೂಸಾಲ್ ಇಂಡಿಯಾ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಡೆದಿರುವ 18 ರಿಂದ 30 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಉದ್ಯೋಗ ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳು ಆಧಾರ್ ಕಾರ್ಡ್ ಮತ್ತು ರೆಸ್ಯೂಮ್, ಭಾವಚಿತ್ರದೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.

ಕರೆ ಮಾಡಲು ದೂರವಾಣಿ ಸಂಖ್ಯೆಗಳು 08172-296374, 8722606874, 8660141863, 9900849750.

ಉಡುಪಿಯಲ್ಲಿ ಉದ್ಯೋಗ ಮೇಳ; ಉಡುಪಿಯಲ್ಲಿ ಮೇ 19ರ ಶುಕ್ರವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಅದ್ವಿತ್ ಐ ಟೆಕ್ ಪ್ರೈ. ಲಿ, ಆಭರಣ ಮೋಟಾರ್ಸ್, ಸುಷ್ಮಾ ಆಟೋಮೊಬೈಲ್ಸ್, ಕಾಂಚನ್ ಅಥರ್ ಎಲೆಕ್ಟ್ರಿಕಲ್ ಹಾಗೂ ಬಿ.ಎಸ್.ಎಲ್ ಇಂಡಿಯಾ ಪ್ರೈ. ಲಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.

ಬೆಳಗ್ಗೆ 10.30 ಕ್ಕೆ ಬಿ. ಎಸ್. ಎಲ್ ಇಂಡಿಯಾ ಪ್ರೈ. ಲಿ, ಸಂಪರ್ಕ ಜೆರಾಕ್ಸ್ ಹತ್ತಿರ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

ಪಾಲ್ಗೊಳ್ಳುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 8105618291, 9945856670 ಹಾಗೂ 9901472710.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+