ಹಾಸನದಲ್ಲಿ ಫೆ. 23, 24ರಂದು ಬೃಹತ್ ಉದ್ಯೋಗ ಮೇಳ
ಹಾಸನ, ಫೆಬ್ರವರಿ 20 : ಹಾಸನದಲ್ಲಿ ಫೆ.23 ಮತ್ತು 24ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷ ವಯೋಮಿತಿಯ ಯುವಕ/ಯುವತಿಯರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಬೆಂಗಳೂರು ಇವರ ಸಹಯೋಗದೊಂದಿಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಜಂಟಿಯಾಗಿ ಉದ್ಯೋಗ ಮೇಳ ಆಯೋಜನೆ ಮಾಡಿದ್ದು ಫೆ.23 ಮತ್ತು ಫೆ.24 ರಂದು ಬೆಳಗ್ಗೆ 10 ಘಂಟೆಯಿಂದ ಮೇಳ ಆರಂಭವಾಗಲಿದೆ. ಬೆಂಗಳೂರು, ಮೈಸೂರು, ಹಾಸನ ಮತ್ತು ಇತರೆ ಜಿಲ್ಲೆಗಳ ಹೆಸರಾಂತ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

7ನೇ ತರಗತಿ ಉತ್ತೀರ್ಣ, ಎಸ್.ಎಸ್.ಎಲ್.ಸಿ ಪಾಸು/ಫೇಲು, ಪಿ.ಯು.ಸಿ, ಪದವಿ, ಐ.ಟಿ.ಐ, ಡ್ರೈವರ್, ಡಿಪ್ಲೂಮಾ, ನರ್ಸಿಂಗ್ ಇಂಜಿನಿಯರಿಂಗ್ ಮತ್ತು ಎಂ.ಬಿ.ಎ ಹಾಗೂ ಯಾವುದೇ ಸ್ನಾತಕೋತ್ತರ ಪದವಿಯಲ್ಲಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಮೇಳದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ನಿರುದ್ಯೋಗಿ ಯುವಕ/ಯುವತಿಯರು ತಮ್ಮ ದಾಖಲಾತಿಯ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಮತ್ತು ಬಯೋಡಾಟ ನೊಂದಿಗೆ ಖುದ್ದಾಗಿ ಹಾಜರಾಗಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜೆ.ಬಿ. ವಿಜಯಲಕ್ಷ್ಮಿ, ಉದ್ಯೋಗಾಧಿಕಾರಿ /ಕೌಶಲ್ಯಾಭಿವೃದ್ದಿ ಅಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಅಥವ ಕೆ.ಡಿ.ಮಂಜುನಾಥ, ಉದ್ಯೋಗಾಧಿಕಾರಿ/ ಕೌಶಲ್ಯಾಭಿವೃದ್ದಿ ಅಧಿಕಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಬಹುದು.












Click it and Unblock the Notifications