ಹಾಸನದಲ್ಲಿ ಜುಲೈ 26ರಂದು ಉದ್ಯೋಗ ಮೇಳ
ಹಾಸನ, ಜುಲೈ 22 : ಹಾಸನದಲ್ಲಿ ಜುಲೈ 26ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಯುವಕ/ಯುವತಿಯರು ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ಬೆಂಗಳೂರು, ಮೈಸೂರು ಮತ್ತು ಹಾಸನದ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿವೆ. ಜುಲೈ 26ರಂದು ಬೆಳಗ್ಗೆ 10 ಗಂಟೆಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
8ನೇ ತರಗತಿ, ಎಸ್.ಎಸ್.ಎಲ್.ಸಿ ಪಾಸು/ಫೇಲು, ಪಿ.ಯು.ಸಿ, ಪದವಿ, ಐ.ಟಿ.ಐ, ಡಿಪ್ಲೂಮೋ, ಸ್ನಾತಕೋತ್ತರ ಪದವಿ ಮತ್ತು ಎಂ.ಬಿ.ಎನಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ನಿರುದ್ಯೋಗಿ ಯುವಕ/ಯುವತಿಯರು ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜೆ.ಬಿ.ವಿಜಯಲಕ್ಷ್ಮಿ, ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ.












Click it and Unblock the Notifications