ಯುವಕ, ಯುವತಿಯರಿಗೆ ನ 23ರಂದು ಹಾಸನದಲ್ಲಿ ಉದ್ಯೋಗ ಮೇಳ
ಹಾಸನ ನವೆಂಬರ್ 16: ಇದೇ ನವೆಂಬರ್ 23ರಂದು ಹಾಸನದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಹಾಸನದ ಹೆಸರಾಂತ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ಸ್ಥಳದಲ್ಲೇ ನೇರವಾಗಿ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ನಿರುದ್ಯೋಗ ಯುವಕ / ಯುವತಿಯರಿಗೆ ನೇರ ಸಂದರ್ಶನಕ್ಕೆ ಅನುಕೂಲವಾಗುವಂತೆ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಎಲ್ಲಿ? ಯಾವಾಗ?
ನವೆಂಬರ್ 23ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಎಸ್.ಎಲ್.ಸಿ. ಫೇಲ್, ಎಸ್.ಎಸ್. ಎಲ್.ಸಿ. ಪಾಸ್, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೊಮಾ (ಎಲ್ಲಾ ಟ್ರೇಡ್ಗಳು) ಮತ್ತು ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ಹೊಂದಿದವರಿಗೆ ಉದ್ಯೋಗ ಅವಕಾಶಗಳು ಲಭ್ಯವಿದೆ.
18-35 ವರ್ಷ ವಯೋಮಿತಿಯ ಉದ್ಯೋಗಾಕಾಂಕ್ಷಿಗಳು ತಮ್ಮ ಬಯೋಡಾಟಾ, ಆಧಾರ್ ಕಾರ್ಡ್ ಮತ್ತು ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಉದ್ಯೋಗ ಮೇಳ ದಲ್ಲಿ ಭಾಗವಹಿಸಿ ಉದ್ಯೋಗ ದೊರೆಯುವ ಸದಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜೆ.ಬಿ.ವಿಜಯಲಕ್ಷ್ಮಿ, ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ಸಂಪರ್ಕಿಸಲು ಕೋರಲಾಗಿದೆ.












Click it and Unblock the Notifications